
ನವದೆಹಲಿ: ಚೀನಾ ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಯೋಜನೆ ಮೂಲಕ ಚೀನಾ ಬಲೂಚಿಸ್ತಾನವನ್ನು ಆಕ್ರಮಿಸುತ್ತಿದೆ ಎಂದು ಆರೋಪಿಸಿ ಬಲೂಚ್ ಸ್ವಾತಂತ್ರ್ಯ ಹೋರಾಟಗಾರರು ಚೀನಾ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬಲೂಚಿಸ್ತಾನ ಸ್ವಾತಂತ್ರ್ಯ ಚಳುವಳಿ ಕಾರ್ಯಕರ್ತರು ಚೀನಾ ಪಾಕಿಸ್ತಾನ ಬಲೂಚಿಸ್ತಾನದ ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಿವೆ ಎಂದು ಸ್ವಾತಂತ್ರ್ಯ ಹೋರಾಟಗಾರರು ಚೀನಾ- ಪಾಕಿಸ್ತಾನದ ವಿರುದ್ಧ ಆರೋಪಿಸಿದ್ದಾರೆ. ಪಾಕಿಸ್ತಾನ ಹಾಗೂ ಚೀನಾ ಎಕನಾಮಿಕ್ ಕಾರಿಡಾರ್ ಯೋಜನೆ ಹೆಸರಿನಲ್ಲಿ ಬಲೂಚಿಸ್ತಾನದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಲೂಚಿಸ್ತಾನದ ವಿಷಯ ಪ್ರಸ್ತಾಪಿಸಿದ ನಂತರ ಬಲೂಚಿಸ್ತಾನ ಸ್ವಾತಂತ್ರ್ಯ ಚಳುವಳಿ ಕಾರ್ಯಕರ್ತರು ಪಾಕಿಸ್ತಾನದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಬಲೂಚಿಸ್ತಾನದಲ್ಲಿರುವ ಅಪಾರ ಪ್ರಮಾಣದ ನೈಸರ್ಗಿಕ ಸಂಪನ್ಮೂಲವನ್ನು ಲೂಟಿ ಹೊಡೆಯುತ್ತಿರುವ ಚೀನಾ- ಪಾಕಿಸ್ತಾನ ಧ್ವಜಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಇದೆ ವೇಳೆ ಪಾಕ್ ಪ್ರಧಾನಿ ನವಾಜ್ ಷರೀಫ್ ಭಾವಚಿತ್ರವನ್ನು ಸುಟ್ಟು ಬಲೂಚ್ ಸ್ವಾತಂತ್ರ್ಯ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.
Advertisement