
ವಾಷಿಂಗ್ಟನ್: ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದ್ದು, ಯುದ್ಧವೇ ಎಲ್ಲದಕ್ಕೂ ಆಯ್ಕೆಯಲ್ಲ ಎಂದು ಅಮೆರಿಕದಲ್ಲಿರುವ ಪಾಕ್ ರಾಯಭಾರಿ ಜಲೀಲ್ ಅಬ್ಬಾಸ್ ಜಿಲಾನಿ ಹೇಳಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎರಡು ದೇಶಗಳಿಗೂ ಆರ್ಥಿಕ ಅಭಿವೃದ್ಧಿಯ ಅಗತ್ಯವಿದೆ. ಯುದ್ಧವೇ ಎಲ್ಲದಕ್ಕೂ ಆಯ್ಕೆಯಲ್ಲ. ಉಭಯ ದೇಶಗಳು ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ದುಡಿಯಬೇಕಿದೆ ಎಂದು ಹೇಳಿದ್ದಾರೆ.
ಎರಡು ದೇಶಗಳ ನಡುವಿನ ಯುದ್ಧದ ಬಗ್ಗೆ ಕಲ್ಪನೆಯನ್ನೂ ಮಾಡಿಕೊಳ್ಳಲೂ ಸಾಧ್ಯವಿಲ್ಲ. ಕಾಶ್ಮೀರ ಸೇರಿ ಇನ್ನಿತರೆ ವಿಚಾರಗಳ ಸಂಬಂಧ ಅಂತರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ತಿಳಿಸಿದ್ದಾರೆ.
Advertisement