ಗಡಿ ನಿಯಂತ್ರಣ ರೇಖೆಗೆ ಪಾಕ್ ಸೇನಾ ಮುಖ್ಯಸ್ಥರ ಭೇಟಿ

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದು, ಕಾರ್ಯಾಚರಣೆಯ ಸನ್ನದ್ಧತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪಾಕ್ ಸೇನಾ ಮುಖ್ಯಸ್ಥ,
ಪಾಕ್ ಸೇನಾ ಮುಖ್ಯಸ್ಥ,

ಇಸ್ಲಾಮಾಬಾದ್: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದು, ಕಾರ್ಯಾಚರಣೆಯ ಸನ್ನದ್ಧತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  
ಪಾಕ್ ಆಕ್ರಮಿತ ಪ್ರದೇಶದ ಹಾಜಿ ಪಿರ್ ಸೆಕ್ಟರ್ ಗೆ ಭೇಟಿ ನೀಡಿದ್ದಾರೆ ಎಂದು ನ್ಯೂ ಇಂಟರ್ ನ್ಯಾಷನಲ್ ವರದಿ ಮಾಡಿದೆ. ಪಾಕ್ ಸೇನಾ ಮುಖ್ಯಸ್ಥ ರಹೀಲ್ ಷರೀಫ್ ಗೆ ಗಡಿ ನಿಯಂತ್ರಣ ರೇಖೆ ಬಳಿ ಇರುವ ಪರಿಸ್ಥಿತಿಯ ಬಗ್ಗೆ ಸ್ಥಳೀಯ ಕಮಾಂಡರ್ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದಿರುವ ರಹೀಲ್ ಷರೀಫ್ ಗಡಿ ನಿಯಂತ್ರಣ ರೇಖೆ ಬಳಿ ಇರುವ ಸೇನಾ ಸನ್ನದ್ಧತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉರಿ ಸೆಕ್ಟರ್ ನಲ್ಲಿ ಭಯೋತ್ಪಾದಕ ದಾಳಿ ಹಾಗೂ ಭಾರತೀಯ ಸೇನೆಯ ಸೀಮಿತ ದಾಳಿ ಬಳಿಕ  ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಗಡಿ ನಿಯಂತ್ರಣ ರೇಖೆಗೆ ಪಾಕ್ ಸೇನಾ ಮುಖ್ಯಸ್ಥರ ಭೇಟಿ ಮಹತ್ವ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com