ಭಾರತ ಭಯೋತ್ಪಾದನೆ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ: ಚೀನಾ

ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ ವಿಧಿಸಬೇಕೆಂಬ ಭಾರತದ ಆಗ್ರಹದ ಬಗ್ಗೆ ಪರೋಕ್ಷವಾಗಿ ಮಾತನಾಡಿರುವ ಚೀನಾ, ಭಯೋತ್ಪಾದನೆ ಮೂಲಕ ಭಾರತ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಹೇಳಿದೆ.
ಚೀನಾ
ಚೀನಾ
Updated on: 

ಬೀಜಿಂಗ್: ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ ವಿಧಿಸಬೇಕೆಂಬ ಭಾರತದ ಆಗ್ರಹದ ಬಗ್ಗೆ ಪರೋಕ್ಷವಾಗಿ ಮಾತನಾಡಿರುವ ಚೀನಾ, ಭಯೋತ್ಪಾದನೆ ಮೂಲಕ ಭಾರತ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಹೇಳಿದೆ.

ಭಾರತ ಭಯೋತ್ಪಾದನೆ ವಿಷಯದಲ್ಲಿ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ ಎಂದು ಆರೋಪಿಸಿರುವ ಚೀನಾದ ವಿದೇಶಾಂಗ ವ್ಯವಹಾರಗಳ ಉಪಸಚಿವ ಯಾರೇ ಆಗಲಿ ಭಯೋತ್ಪಾದನೆ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಬಾರದು ಎಂದು ಸಲಹೆ ನೀಡಿದೆ.

ಭಯೋತ್ಪಾದನೆ ವಿಷಯದಲ್ಲಿ ದ್ವಂದ್ವ ನಿಲುವು ಇರಬಾರದು ಅಂತೆಯೇ ಭಯೋತ್ಪಾದನೆಯನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭವನ್ನು ಪಡೆಯಬಾರದು, ಪಾಕಿಸ್ತಾನ ಭಾರತದಲ್ಲಿ ಭಯೋತ್ಪಾದನೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದ ದಾಖಲೆಗಳ ಬಗ್ಗೆ ಭಾರತ- ಪಾಕಿಸ್ತಾನ ಮಾತುಕತೆ ನಡೆಸಬೇಕು ಎಂದು ಚೀನಾ ಹೇಳಿದೆ. ಅಕ್ಟೊಬರ್ ನಲ್ಲಿ ಗೋವಾದಲ್ಲಿ 8 ನೇ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಚೀನಾ ಅಧ್ಯಕ್ಷರು ಭಾಗವಹಿಸುವುದರ ಬಗ್ಗೆ ಮಾತನಾಡುತ್ತಾ ಚೀನಾ ಸಚಿವರು ಭಾರತದ ವಿರುದ್ಧ ಆರೋಪ ಮಾಡಿದ್ದಾರೆ.

ಇನ್ನು ಎನ್ಎಸ್ ಜಿ ಸದಸ್ಯತ್ವದ ಬಗ್ಗೆಯೂ ಮಾತನಾಡಿರುವ ಚೀನಾ ಭಾರತದ ಎನ್ಎಸ್ ಜಿ ಸದಸ್ಯತ್ವದ ಬಗ್ಗೆ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ತಿಳಿಸಿದೆ. ವಿಶ್ವಸಂಸ್ಥೆಯಲ್ಲಿ   ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ ವಿಧಿಸಬೇಕೆಂಬ ಭಾರತದ ಆಗ್ರಹಕ್ಕೆ ಚೀನಾ ಇತ್ತೀಚಿಗೆ 2 ನೇ ಬಾರಿ ಅಡ್ಡಗಾಲು ಹಾಕಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com