ಬಾಂಗ್ಲಾ- ಚೀನಾದ ದ್ವಿಪಕ್ಷೀಯ ಸಂಬಂಧ ಭಾರತದ ಮೇಲೆ ಒತ್ತಡ ಹೇರಲಿದೆ: ಚೀನಾ ಪತ್ರಿಕೆ

ಅ.15 ರಂದು ಗೋವಾದಲ್ಲಿ ನಡೆಯಲಿರುವ 8 ನೇ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಲು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಆಗಮಿಸುತ್ತಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಬೀಜಿಂಗ್: ಅ.15 ರಂದು ಗೋವಾದಲ್ಲಿ ನಡೆಯಲಿರುವ 8 ನೇ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಲು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದು, ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ.

ಈ ಬಗ್ಗೆ ಸಂಪಾದಕೀಯ ಬರೆದಿರುವ ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ಗ್ಲೋಬಲ್ ಟೈಮ್ಸ್, ಬಾಂಗ್ಲಾ-ಚೀನಾ ದ್ವಿಪಕ್ಷೀಯ ಸಂಬಂಧ ಹೆಚ್ಚುತ್ತಿರುವುದರಿಂದ ಭಾರತ ಅಸೂಯೆ ಪಡಬೇಕಿಲ್ಲ ಎಂದು ಹೇಳಿದೆ. ಅಷ್ಟೇ ಅಲ್ಲದೇ, ಬಾಂಗ್ಲಾದೇಶವನ್ನು ಚೀನಾ ನವದೆಹಲಿಯ ತೆಕ್ಕೆಯಿಂದ ತನ್ನತ್ತ ಸೆಳೆದುಕೊಳ್ಳಲಿದೆ ಎಂದು ಭಯಪಡಬೇಕಿಲ್ಲ ಎಂದು ಹೇಳಿದೆ.

ಬಾಂಗ್ಲಾ-ಚೀನಾ ನಡುವೆ ದ್ವಿಪಕ್ಷೀಯ ಸಂಬಂಧ ಹೆಚ್ಚುವುದರಿಂದ ಭಾರತ ಏಷ್ಯಾ ಪ್ರದೇಶದಲ್ಲಿ ತನ್ನ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಪರಾಮರ್ಶಿಸುವಂತೆ ಒತ್ತಡ ಉಂಟಾಗಲಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆ ಸಂಪಾದಕೀಯ ಬರೆದಿದೆ. ಅ.14 ರಂದು ಕ್ಸಿ ಜಿನ್ ಪಿಂಗ್ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಕಳೆದ 30 ವರ್ಷಗಳಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿರುವ ಮೊದಲ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com