ಕಾಶ್ಮೀರದ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಮಾತುಕತೆಗೆ ಪಾಕ್ ಸಿದ್ಧ: ನವಾಜ್ ಷರೀಫ್

ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್...
ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್
ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್

ಬಕು: ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಶನಿವಾರ ಹೇಳಿದ್ದಾರೆ.

ಅಜರ್ಬೈಜಾನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತದೊಂದಿಗಿರುವ ಕಾಶ್ಮೀರ ಹಾಗೂ ಇನ್ನಿತರೆ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ. ಈ ಬಗ್ಗೆ ಮಾತುಕತೆ ನಡೆಸಲು ಭಾರತವನ್ನು ಆಹ್ವಾನಿಸಿತ್ತು. ಆದರೆ, ಸಮಸ್ಯೆ ಬಗ್ಗೆ ಮಾತನಾಡಲು ಭಾರತವೇ ಸಿದ್ಧವಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿವೆ. ಹಿಂಸಾಚಾರಗಳು ತೀವ್ರಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆದರೂ, ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ ಎಂದಿದ್ದಾರೆ.

ಇದೇ ವೇಳೆ ಉರಿ ಸೆಕ್ಟರ್ ಸೇನಾ ಪ್ರಧಾನ ಕಚೇರಿ ಮೇಲೆ ನಡೆದ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಇಲ್ಲಸಲ್ಲದ ಆರೋಪಗಳನ್ನು ಪಾಕಿಸ್ತಾನದ ಮೇಲೆ ಮಾಡುತ್ತಿದೆ. ದಾಳಿ ಪ್ರಕರಣವನ್ನು ತನಿಖೆ ನಡೆಸದೆಯೇ ಇಸ್ಲಾಮಾಬಾದ್ ಮೇಲೆ ಆರೋಪಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com