ಭ್ರಷ್ಟಾಚಾರ: ಪ್ರಧಾನಿ ಷರೀಫ್ ಸೇರಿ ಹಲವರಿಗೆ ಸುಪ್ರೀಂಕೋರ್ಟ್ ನೋಟಿಸ್

ಪನಾಮ ಪೇಪರ್ಸ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಸುಪ್ರೀಂಕೋರ್ಟ್ ಪ್ರಧಾನಿ ನವಾಜ್ ಷರೀಫ್ ಮತ್ತು ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ...
ನವಾಜ್ ಷರೀಫ್
ನವಾಜ್ ಷರೀಫ್
ಇಸ್ಲಾಮಾಬಾದ್: ಪನಾಮ ಪೇಪರ್ಸ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಸುಪ್ರೀಂಕೋರ್ಟ್ ಪ್ರಧಾನಿ ನವಾಜ್ ಷರೀಫ್ ಮತ್ತು ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಿದೆ. 
ಪನಾಮ ಪೇಪರ್ಸ್ ಸೋರಿಕೆಯಲ್ಲಿ ಷರೀಫ್ ಮತ್ತು ಅವರ ಕುಟುಂಬಸ್ಥರು ಬ್ರಿಟನ್ ನಲ್ಲಿ ಆಸ್ತಿ ಹೊಂದಿರುವುದು ಬಹಿರಂಗವಾಗಿತ್ತು. ಈ ಸಂಬಂಧ ಪಾಕಿಸ್ತಾನ ತೆಹ್ರೇಕ್ ಇ ಇನ್ಸಾಫ್ ಪಕ್ಷದ ಮುಖಂಡ ಇಮ್ರಾನ್ ಖಾನ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 
ಇಮ್ರಾನ್ ಖಾನ್ ಅರ್ಜಿಯಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಮತ್ತು ವಿದೇಶದಲ್ಲಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ಮೇಲೆ ನವಾಜ್ ಷರೀಫ್ ಅವರನ್ನು ಅನರ್ಹಗೊಳಿಸಬೇಕು ಎಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಷರೀಫ್ ವಿರುದ್ಧ ನೋಟಿಸ್ ಜಾರಿ ಮಾಡಿದೆ. 
ನವಾಜ್ ಷರೀಫ್ ಸೇರಿದಂತೆ ಅವರ ಪುತ್ರಿ ಮರಿಯಮ್ ಅವರ ಮಕ್ಕಳಾದ ಹಸನ್ ಮತ್ತು ಹುಸೇನ್, ಅಳಿಯ ಮೊಹಮ್ಮದ್ ಸಫ್ದಾರ್, ಹಣಕಾಸು ಸಚಿವ ಇಶಕ್ ದರ್, ಫೆಡರಲ್ ಇನ್ವೆಸ್ಟಿಗೇಷನ್ ಏಜನ್ಸಿಯ ಡಿಜಿ, ಫೆಡರಲ್ ಬೋರ್ಡ್ ಆಫ್ ರೆವಿನ್ಯೂನ ಅಧ್ಯಕ್ಷ ಮತ್ತು ಅಟಾರ್ನಿ ಜನರಲ್ ಗೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ನೋಟಿಸ್ ಜಾರಿ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com