ಸಿಂಧೂ ನದಿ ಜಲ ಒಪ್ಪಂದ ಉಲ್ಲಂಘಸಿದರೆ ಸೂಕ್ತ ಕ್ರಮ: ಭಾರತಕ್ಕೆ ಪಾಕ್ ಎಚ್ಚರಿಕೆ

ಸಿಂಧೂ ನದಿ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿರುವ ಪಾಕಿಸ್ತಾನ, ಒಂದು ವೇಳೆ ಒಪ್ಪಂದ ಉಲ್ಲಂಘನೆಯಾಗಿದ್ದೇ ಆದರೆ ಭಾರತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಪಾಕಿಸ್ತಾನ
ಪಾಕಿಸ್ತಾನ

ಇಸ್ಲಾಮಾಬಾದ್: ಸಿಂಧೂ ನದಿ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿರುವ ಪಾಕಿಸ್ತಾನ, ಒಂದು ವೇಳೆ ಒಪ್ಪಂದ ಉಲ್ಲಂಘನೆಯಾಗಿದ್ದೇ ಆದರೆ ಭಾರತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಭಯೋತ್ಪಾದನೆ ಉತ್ತೇಜಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಸಿಂಧೂ ನದಿ ಜಲ ಒಪ್ಪಂದವನ್ನು ಪರಾಮರ್ಶಿಸುವ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆ, ಒಂದು ವೇಳೆ ಭಾರತ ಸಿಂಧೂ ನದಿ ಜಲ ಒಪ್ಪಂದವನ್ನು ಉಲ್ಲಂಘಿಸಿದ್ದೇ ಆದಲ್ಲಿ ಭಾರತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ನಫೀಜ್ ಝಕಾರಿಯಾ ಹೇಳಿದ್ದಾರೆ.

ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ದೌರ್ಜನ್ಯಗಳ ಬಗ್ಗೆ ವಿಷಯಾಂತರ ಮಾಡಲು ಭಾರತ  ಪ್ರಯತ್ನಿಸುತ್ತಿದೆ. ಕಾಶ್ಮೀರದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ಪಾಕಿಸ್ತಾನ ಎತ್ತಿ ತೋರಿಸುತ್ತಿದೆ ಎಂದು ಪಾಕಿಸ್ತಾನ ವಿದೇಶಾಂಗ ವಕ್ತಾರ ಝಕಾರಿಯಾ ಹೇಳಿದ್ದಾರೆ. ಇದೇ ವೇಳೆ ಪಾಕಿಸ್ತಾನದ ಕಲಾವಿದರಿಗೆ ಭಾರತದಲ್ಲಿ ನೀಡಲಾಗುತ್ತಿರುವ ಗೌರವದ ಬಗ್ಗೆಯೂ ಮಾತನಾಡಿರುವ ಪಾಕ್ ವಿದೇಶಾಂಗ ಇಲಾಖೆ ವಕ್ತಾರ, ಭಾರತದಲ್ಲಿ ಪಾಕಿಸ್ತಾನದ ಕಲಾವಿದರಿಗೆ ಅವಮಾನ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com