ಜನಾದೇಶದ ಬಗ್ಗೆ ಟ್ರಂಪ್ ಹೇಳಿಕೆ ಅಪಾಯಕಾರಿ: ಬರಾಕ್ ಒಬಾಮ

ತಮ್ಮ ಸೋಲು, ಗೆಲುವನ್ನು ಆಧರಿಸಿ ಜನಾದೇಶವನ್ನು ಒಪ್ಪುವ ಅಥವಾ ಒಪ್ಪದೇ ಇರುವ ಡೊನಾಲ್ಡ್ ಟ್ರಂಪ್ ಹೇಳಿಕೆ ಅಪಾಯಕಾರಿಯಾದದ್ದು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆತಂಕ ವ್ಯಕ್ತಪಡಿಸಿದ್ದಾರೆ.
ಬರಾಕ್ ಒಬಾಮ
ಬರಾಕ್ ಒಬಾಮ
Updated on: 

ವಾಷಿಂಗ್ ಟನ್: ತಮ್ಮ ಸೋಲು, ಗೆಲುವನ್ನು ಆಧರಿಸಿ ಜನಾದೇಶವನ್ನು ಒಪ್ಪುವ ಅಥವಾ ಒಪ್ಪದೇ ಇರುವ ಡೊನಾಲ್ಡ್ ಟ್ರಂಪ್ ಹೇಳಿಕೆ ಅಪಾಯಕಾರಿಯಾದದ್ದು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆತಂಕ ವ್ಯಕ್ತಪಡಿಸಿದ್ದಾರೆ.
ಟ್ರಂಪ್ ಅವರ ಹೇಳಿಕೆ ಅಮೆರಿಕದ ಪ್ರಜಾಪ್ರಭುತ್ವವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಬರಾಕ್ ಒಬಾಮ ಹೇಳಿರುವುದನ್ನು ಬಿಬಿಸಿ ವರದಿ ಮಾಡಿದೆ. ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಪರ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಬರಾಕ್ ಒಬಾಮ ಹೇಳಿಕೆ ನೀಡಿದ್ದು, ಟ್ರಂಪ್ ಹೇಳಿಕೆ ಅಪಾಯಕಾರಿ ಎಂದಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ್ದ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್, ನಾನು ಗೆದ್ದರೆ ಮಾತ್ರ ಅಮೆರಿಕದ ಮತದಾರರ ಆದೇಶವನ್ನು ಒಪ್ಪುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಹಾಲಿ ಅಧ್ಯಕ್ಷ ಬರಾಕ್ ಒಬಾಮ, ಅಮೆರಿಕ ಅಧ್ಯಕ್ಷೀಯ ಚುನಾವಣೆಯ ನ್ಯಾಯಬದ್ಧತೆ ಬಗ್ಗೆ ಜನರಿಗೆ ಅನುಮಾನ ಮೂಡಿಸುವುದು ಅಮೆರಿಕದ ಶತೃ ರಾಷ್ಟ್ರಗಳಿಗೆ ನೆರವು ಮಾಡಿಕೊಟ್ಟಂತೆ ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಓಟ್ ರಿಗ್ಗಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಟ್ರಂಪ್, ತಾವು ಚುನಾವಣೆಯಲ್ಲಿ ಗೆದ್ದರೆ ಮಾತ್ರ ಜನಾದೇಶವನ್ನು ಒಪ್ಪುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com