ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಪ್ರವಾಸಿ ಬಸ್ ಡಿಕ್ಕಿ - 13 ಸಾವು, 31 ಮಂದಿಗೆ ಗಾಯ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿ, 31 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಪ್ರವಾಸಿ ಬಸ್ ಡಿಕ್ಕಿ - 13 ಸಾವು, 31 ಮಂದಿಗೆ ಗಾಯ
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಪ್ರವಾಸಿ ಬಸ್ ಡಿಕ್ಕಿ - 13 ಸಾವು, 31 ಮಂದಿಗೆ ಗಾಯ
Published On :

ಪಾಲ್ಮ್ ಸ್ಪ್ರಿಂಗ್ಸ್: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿ, 31 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಕ್ಯಾಲಿಫೋರ್ನಿಯಾದ ಹೆದ್ದಾರಿಯಲ್ಲಿ ಪ್ರವಾಸಿಗರನ್ನು ಹೊತ್ತು ವೇಗವಾಗಿ ಬಸ್ ಹೋಗುತ್ತಿದ್ದು. ಈ ವೇಳೆ ಬಸ್ ಮೇಲಿದ್ದ ನಿಯಂತ್ರಣ ಕಳೆದುಕೊಂಡ ಚಾಲಕ ಇದ್ದಕ್ಕಿದ್ದಂತೆ ಟ್ರಕ್ ವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನಲ್ಲಿದ್ದ 13 ಪ್ರವಾಸಿಗರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಯುಎಸ್ಎ ಹಾಲಿಡೇ ಟೂರ್ ಬಸ್ ಇದಾಗಿದ್ದು, ರೆಡ್ ಅರ್ಥ್ ಕ್ಯಾಸಿನೋ ಇಂದ ಲಾಸ್ ಏಂಜಲ್ಸ್ ಗೆ ಹಿಂತಿರುಗಿ ಬರುತ್ತಿತ್ತು. ಘಟನೆ ವೇಳೆ ಚಾಲಕ ಕೂಡ ಸಾವನ್ನಪ್ಪಿದ್ದು, ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.