
ಇಸ್ಲಾಮಾಬಾದ್: ಡಿಸೆಂಬರ್ ಮೊದಲ ವಾರದಲ್ಲಿ ಭಾರತದ ಅಮೃತ ಸರದಲ್ಲಿ ನಡೆಯುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಸತ್ರಾಜ್ ಆಜೀಜ್ ಸ್ಪಷ್ಟ ಪಡಿಸಿದ್ದಾರೆ.
ಇಸ್ಲಮಾಬಾದ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸತ್ರಾಜ್ ಅಜೀಜ್ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಕಾಶ್ಮೀರಿ ಜನತೆಗೋಸ್ಕರ ಪರಿಣಾಮಕಾರಿಯಾದ ಹೋರಾಟ ನಡೆಸಲು ನಿರ್ಣಯ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಸೆಪ್ಟಂಬರ್ 18 ರಂದು ಉರಿ ಉಗ್ರರ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಎರಡು ರಾಷ್ಟ್ರಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ರಷ್ಯಾ, ಚೀನಾ, ಟರ್ಕಿ ಸೇರಿದಂತೆ ಒಟ್ಟುನ 14 ರಾಷ್ಟ್ರಗಳ ವಿದೇಶಾಂಗ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Advertisement