ದಲೈ ಲಾಮಾ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದರೆ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ: ಚೀನಾ

ದಲೈ ಲಾಮಾ ಅವರ ಅರುಣಾಚಲ ಪ್ರದೇಶದ ಭೇಟಿಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ದಲೈ ಲಾಮಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದರೆ ಶಾಂತಿ ಕದಡಿದಂತಾಗುತ್ತದೆ...
ದಲೈ ಲಾಮಾ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದರೆ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ: ಚೀನಾ
ದಲೈ ಲಾಮಾ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದರೆ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ: ಚೀನಾ

ಬೀಜಿಂಗ್: ಈಗಾಗಲೇ ನಿಗದಿಯಾಗಿರುವ ದಲೈ ಲಾಮಾ ಅವರ ಅರುಣಾಚಲ ಪ್ರದೇಶದ ಭೇಟಿಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ದಲೈ ಲಾಮಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದರೆ ಗಡಿ ಪ್ರದೇಶದಲ್ಲಿ ಶಾಂತಿ ಕದಡಿದಂತಾಗುತ್ತದೆ ಎಂದು ಚೀನಾ ಎಚ್ಚರಿಸಿದೆ.
 
ದಲೈ ಲಾಮಾ ಅವರ ಅರುಣಾಚಲ ಪ್ರದೇಶದ ಭೇಟಿಯಿಂದ ಗಡಿಯಲ್ಲಿ ಶಾಂತಿಗೆ ಧಕ್ಕೆ ಉಂಟಾಗುವುದರ ಜೊತೆಗೆ ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧವೂ ಹದಗೆಡಲಿದೆ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರ ಲು ಕಾಂಗ್ ಎಚ್ಚರಿಸಿದ್ದಾರೆ.

ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮ ಖಂಡು ಅವರ ಆಹ್ವಾನದ ಮೇರೆಗೆ ಬೌದ್ಧ ಧರ್ಮ ಗುರು ದಲೈ ಲಾಮಾ 2017 ಕ್ಕೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ದಲೈ ಲಾಮಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವುದು ಖಚಿತವಾಗುತ್ತದ್ದಂತೆಯೇ ಚೀನಾ ವಿರೋಧ ವ್ಯಕ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com