ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ 15 ಪಾಕಿಸ್ತಾನ ರೇಂಜರ್ ಗಳನ್ನು ಹತ್ಯೆ ಮಾಡಿದ್ದೇವೆ ಎಂಬ ಬಿಎಸ್ಎಫ್ ಹೇಳಿಕೆಯನ್ನು ನಿರಾಕರಿಸಿರುವ ಪಾಕಿಸ್ತಾನ ನಮ್ಮ ಯೋಧರು ಹತ್ಯೆಯಾಗಿಲ್ಲ ಎಂದು ಹೇಳಿದೆ.
ಪಾಕ್ ಸೈನಿಕರ ಗುಂಡಿನ ದಾಳಿಗೆ ಪ್ರತಿಯಾಗಿ ನಮ್ಮ ಯೋಧರು ಪ್ರತಿದಾಳಿ ನಡೆಸಿ ಪಾಕಿಸ್ತಾನದ 15 ರೇಂಜರ್ ಗಳನ್ನು ಹತ್ಯೆ ಮಾಡಿದ್ದೇವೆ ಎಂದು ಬಿಎಸ್ಎಫ್ ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಬಿಎಸ್ಎಫ್ ಹೇಳಿಕೆ ನಿರಾಧಾರ ಮತ್ತು ಸತ್ಯಕ್ಕೆ ದೂರವಾದುದು ಎಂದು ಹೇಳಿದೆ.
ಭಾರತ ಕಾಶ್ಮೀರ ಸಮಸ್ಯೆ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯುವುದಕ್ಕಾಗಿ ಮತ್ತು ತಮ್ಮ ನಷ್ಟವನ್ನು ಅಡಗಿಸುವುದಕ್ಕಾಗಿ ಈ ರೀತಿಯ ನಿರಾಧಾರ ಹೇಳಿಕೆಗಳನ್ನು ನೀಡುತ್ತಿದೆ ಎಂದು ಪಾಕಿಸ್ತಾನದ ಅಂತರ್ ಸೇವೆಯ ಸಾರ್ವಜನಿಕ ಸಂಪರ್ಕ ಇಲಾಖೆ(ಐಎಸ್ಪಿಆರ್) ಹೇಳಿದೆ.