

ಸ್ಟೋಕ್ಸ್'ಡೇಲ್: ಜನರನ್ನು ಹೊತ್ತು ಚರ್ಚ್ ಗೆ ತೆರಳುತ್ತಿದ್ದ ವ್ಯಾನ್ ಗೆ ವೇಗವಾಗಿ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕೆರೊಲಿನಾ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ವ್ಯಾನೊಂದು 158 ಹೆದ್ದಾರಿಯಲ್ಲಿ ಚಲಿಸುತ್ತಿತ್ತು, ಉತ್ತರಾಭಿಮುಖವಾಗಿ ಚೆವ್ರೊಲೆಟ್ ಬ್ಲೇಜರ್ ರಸ್ತೆಯ ದಾಟುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು ವ್ಯಾನ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಾನ್ ನಲ್ಲಿದ್ದ 90 ವರ್ಷದ ವೃದ್ಧೆ ಸೇರಿದಂತೆ 16 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಕಾರು ಚಾಲಕ ಡಿಯಾದ್ರ ರಿಚೆಲ್ ಶಫ್ಫರ್ ಎಂಬಾತನನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದೆ.
ಇದೀಗ ಕಾರು ಚಾಲಕನ ವಿರುದ್ಧ ನಿರ್ಲಕ್ಷ್ಯ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.