

ಯುನೈಟೆಡ್ ನೇಷನ್ಸ್: ಸಿರಿಯಾ ಘರ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೆ.21 ಕ್ಕೆ ಉನ್ನತ ಮಟ್ಟದ ಸಭೆ ನಡೆಸಲಿದೆ.
ಸಿರಿಯಾದಲ್ಲಿ ಪ್ರಸ್ತುತ ನಡೆಯುತ್ತಿರುವ ಘರ್ಷಣೆಗೆ ರಾಜಕೀಯ ಪರಿಹಾರ ಕಂಡುಕೊಳ್ಳುವುದಕ್ಕೆ ಈ ಸಭೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ನ್ಯೂಜಿಲ್ಯಾಂಡ್ ನ ಪ್ರಧಾನಿ ಜಾನ್ ಕಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದ್ದು ಸಿರಿಯಾದಲ್ಲಿ ಶಾಂತಿ ಸ್ಥಾಪನೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ವಿಶ್ವಸಂಸ್ಥೆ ಮಹಾಸಭೆಯ ಸಂದರ್ಭದಲ್ಲಿ ಈ ಸಭೆ ಕೂಡ ನಡೆಯಲಿದ್ದು, ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಉನ್ನತ ಮಟ್ಟದ ಸಭೆಯಲ್ಲಿ ಭದ್ರತೆ ಹಾಗು ಭಯೋತ್ಪಾದನೆ ನಿಗ್ರಹದ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ.