ಪ್ರಧಾನಿ ಮೋದಿ ವಿಯೆಟ್ನಾಂ ಪ್ರವಾಸ: 12 ಒಪ್ಪಂದಗಳಿಗೆ ಸಹಿ

ವಿಯೆಟ್ನಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ವಿಯೆಟ್ನಾಯಂ ನೊಂದಿಗೆ ರಕ್ಷಣಾ ಕ್ಷೇತ್ರ, ಆರೋಗ್ಯ ಸೇರಿದಂತೆ 12 ಒಪ್ಪಂದಗಳಿಗೆ ಸಹಿಹಾಕಿದ್ದಾರೆ.
ವಿಯೆಟ್ನಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ
ವಿಯೆಟ್ನಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ

ಹನೋಯಿ: ವಿಯೆಟ್ನಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ವಿಯೆಟ್ನಾಂ ನೊಂದಿಗೆ ರಕ್ಷಣಾ ಕ್ಷೇತ್ರ, ಆರೋಗ್ಯ ಸೇರಿದಂತೆ 12 ಒಪ್ಪಂದಗಳಿಗೆ ಸಹಿಹಾಕಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹನೋಯಿಯ ರಾಷ್ಟ್ರಾಧ್ಯಕ್ಷರ ಅಧಿಕೃತ ನಿವಾಸದಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಪ್ರಧಾನಿ ನರೇಂದ್ರ ಮೋದಿ- ವಿಯೆಟ್ನಾಂ ಅಧ್ಯಕ್ಷರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆಗೂ ಮುನ್ನ ವಿಯೆಟ್ನಾಂ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನಪ್ರಿಯ ನಾಯಕ ಹೊ ಚಿ ಮಿನ್ಹ್ ಗೆ ಗೌರವ ಅರ್ಪಿಸಿದ್ದಾರೆ.

15 ವರ್ಷಗಳಲ್ಲಿ ವಿಯೆಟ್ನಾಯಂ ಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದು, ವಿಯೆಟ್ನಾಂ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com