
ಕರಾಚಿ: ನವೆಂಬರ್ ನಲ್ಲಿ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದಾರೆ ಎಂದು ಭಾರತೀಯ ಹೈಕಮಿಷನರ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರಿ ಗೌತಮ್ ಬಾಂಬಾವಲೆ ಬಾಂಬವಾಲೆ, ನಿರ್ದಿಷ್ಟ ವ್ಯಾಪ್ತಿಯ ವಿಷಯಗಳನ್ನು ಭಾರತ- ಪಾಕಿಸ್ತಾನ ಚರ್ಚಿಸಬೇಕು ಎಂದು ಗೌತಮ್ ಬಾಂಬಾವಲೆ ಎಂದು ಹೇಳಿದ್ದಾರೆ.
ಭವಿಷ್ಯದ ಬಗ್ಗೆ ಏನನ್ನೂ ಹೇಳಲಾರೆ, ಆದರೆ ಇವತ್ತಿನ ಮಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನ- ಭಾರತದ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನಕ್ಕೆ ಗೈರು ಹಾಜರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತದ ಹೈಕಮಿಷನರ್ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.
Advertisement