ನ್ಯೂಜೆರ್ಸಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಸರ್ಕಾರದ ಕಾರ್ಯವನ್ನು ವಿರೋಧಿಸಿ ಮಂಡ್ಯದಲ್ಲಿ ಆಕ್ರೋಶ ಭುಗಿಲೆದಿದ್ದು, ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಬೆಂಬಲಿಸಿ ಅಮೆಕದಲ್ಲೂ ಪ್ರತಿಭಟನೆ ನಡೆದಿದೆ.
ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಕರ್ನಾಟಕದಿಂದ ತೆರಳಿರುವ ಕಲಾವಿದರು ನ್ಯೂಜೆರ್ಸಿಯಲ್ಲಿ ಫಲಕಗಳನ್ನು ಹಿಡಿದುಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ರಾಜ್ಯದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದ್ದು, ಕೃಷ್ಣರಾಜಸಾಗರ, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಮೂಲಕ ನೀರು ಹರಿಸುತ್ತಿದೆ.