ವಿಶ್ವಸಂಸ್ಥೆಯಲ್ಲಿ ಬಲೂಚಿಸ್ತಾನ ವಿಚಾರ ಪ್ರಸ್ತಾಪ: ಪಾಕ್ ಕಿವಿ ಹಿಂಡಿದ ಭಾರತ

ವಿಶ್ವಸಂಸ್ಥೆಯ ವೇದಿಕೆಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಬಲೂಚಿಸ್ತಾನ ವಿಚಾರವನ್ನು ಭಾರತ ಪ್ರಸ್ತಾಪ ಮಾಡಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಿನೀವಾ: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಬಲೂಚಿಸ್ತಾನ ವಿಚಾರವನ್ನು ಭಾರತ ಪ್ರಸ್ತಾಪ ಮಾಡಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನವೊಂದರಲ್ಲಿ ಮಾತನಾಡಿರುವ ಜಿನೀವಾ ವಿಶ್ವಸಂಸ್ಥೆಯ ಭಾರತದ ರಾಯಭಾರಿ ಮತ್ತು ಶಾಶ್ವತ ಪ್ರತಿನಿಧಿ ಅಜಿತ್ ಕುಮಾರ್ ಅವರು, ಬಲೂಚಿಸ್ತಾನ ವಿಚಾರವನ್ನು ಪ್ರಸ್ತಾಪ ಮಾಡುವ ಮೂಲಕ ಪಾಕಿಸ್ತಾನದ ಕಿವಿ ಹಿಂಡಿದ್ದಾರೆ.

ಬಲೂಚಿಸ್ತಾನದಲ್ಲಿ ವ್ಯಾಪಕವಾಗಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಎದುರಾಗಿದೆ. ಇದರ ಪರಿಣಾಮ ಕಾಶ್ಮೀರದಲ್ಲಿ ಇಂದಿಗೂ ಹಿಂಸಾಚಾರ ಮುಂದುವರೆದಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಭಯೋತ್ಪಾದನಾ ಉತ್ಪಾದಕ ಕೇಂದ್ರವಾಗಿ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮಣವಾಗಿ ದಾಳಿ ಮಾಡುತ್ತಿದೆ. ಮಾನವ ಹಕ್ಕುಗಳನ್ನು ಉಲ್ಲಂಘನೆಯನ್ನು ಪಸರಿಸುತ್ತಿರುವ ಪಾಕಿಸ್ತಾನ, ಮೊದಲು ತನ್ನ ದೇಶದಲ್ಲಿ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಅಗತ್ಯವಿದೆ.

ಜಮ್ಮು ಮತ್ತು ಕಾಶ್ಮೀರ ವಿಚಾರ ಸಂಬಂಧ ನೀಡಲಾಗಿರುವ ವೇದಿಕೆಯನ್ನು ಪಾಕಿಸ್ತಾನ ದುರಪಯೋಗ ಮಾಡಿಕೊಳ್ಳುತ್ತಿದೆ. ಗಡಿಯಲ್ಲಿ ಕದನ ವಿರಾಮ ಮಾಡುತ್ತಿರುವುದು, ದಾಳಿ ಮಾಡುವುದು, ಭಯೋತ್ಪಾದಕರ ಮೂಲಸೌಕರ್ಯಗಳನ್ನು ಹತ್ತಿಕ್ಕಿ, ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಬಿಡುವಂತೆ ಸಾಕಷ್ಟು ರಾಷ್ಟ್ರಗಳು ಪದೇ ಪದೇ ಪಾಕಿಸ್ತಾನಕ್ಕೆ ಹೇಳುತ್ತಲೇ ಬಂದಿದೆ. ಆದರೆ, ಪಾಕಿಸ್ತಾನ ಮಾತ್ರ ಇದಾವುದನ್ನೂ ಕಿವಿಗೆ ಹಾಕಿಕೊಳ್ಳದೆ, ತನ್ನ ಉದ್ಧಟತನವನ್ನು ಮುಂದುವರೆಸುತ್ತಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com