ಪಾಕ್ ಸ್ಫೋಟ: ಸಾವಿನ ಸಂಖ್ಯೆ 28ಕ್ಕೇರಿಕೆ, ದಾಳಿಯ ಹೊಣೆ ಹೊತ್ತ ಜಮಾತ್ ಉಲ್ ಅಹ್ರಾರ್

ಪಾಕಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದ್ದು...
ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು
ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು
Updated on
ಇಸ್ಲಾಮಾಬಾದ್: ಪಾಕಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿದ್ದು, ತಾಲಿಬಾನ್ ಉಗ್ರ ಸಂಘಟನೆಯ ಜಮಾತ್ ಉಲ್ ಅಹ್ರಾರ್(ಜೆಯುಎ) ದಾಳಿಯ ಹೊಣೆ ಹೊತ್ತುಕೊಂಡಿದೆ.
ನಿನ್ನೆ ಮಧ್ಯರಾತ್ರಿ ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಯುಎ, ಅನ್ಬರ್ ಜಿಲ್ಲೆಯ ಶಾಂತಿ ಸಮಿತಿ ನಮ್ಮ ಟಾರ್ಗೆಟ್ ಆಗಿತ್ತು ಎಂದು ಹೇಳಿದೆ.
ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಭಾಗದ ಅನ್ಬರ್ ಜಿಲ್ಲೆಯ ತೇಸಿಲ್ ನ ಮಸೀದಿಯಲ್ಲಿ ಮುಸ್ಲಿಮರು ಶುಕ್ರವಾರ ಪಾರ್ಥನೆಯಲ್ಲಿ ತೊಡಗಿದ್ದ ವೇಳೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ. ಈ ಸ್ಫೋಟದಲ್ಲಿ 28 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com