ವಾಷಿಂಗ್ಟನ್ ಶಾಪಿಂಗ್ ಮಾಲ್ ನಲ್ಲಿ ಗುಂಡಿನ ದಾಳಿ (ಸಂಗ್ರಹ ಚಿತ್ರ)
ವಾಷಿಂಗ್ಟನ್ ಶಾಪಿಂಗ್ ಮಾಲ್ ನಲ್ಲಿ ಗುಂಡಿನ ದಾಳಿ (ಸಂಗ್ರಹ ಚಿತ್ರ)

ವಾಷಿಂಗ್ಟನ್ ಶೂಟಿಂಗ್ ಪ್ರಕರಣ: ಕಾರ್ಯಾಚರಣೆಯಲ್ಲಿ ಶಂಕಿತನ ಬಂಧನ

ಅಮೆರಿಕದ ವಾಷಿಂಗ್ಟನ್ ನಲ್ಲಿ ಶಾಪಿಂಗ್ ಮಾಲ್ ನಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಭಾನುವಾರ ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ನಲ್ಲಿ ಶಾಪಿಂಗ್ ಮಾಲ್ ನಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಭಾನುವಾರ ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದಾರೆ.

ವಾಷಿಂಗ್ಟನ್ ನ ಬರ್ಲಿಂಗ್ಟನ್  ಪ್ರದೇಶದಲ್ಲಿರುವ ಕ್ಯಾಸ್ಕೇಡ್ ಶಾಪಿಂಗ್ ಮಾಲ್ ನಲ್ಲಿ ಶನಿವಾರ ನಡೆದಿದ್ದ ಭೀಕರ ಗುಂಡಿನ ದಾಳಿಯಲ್ಲಿ ಐವರು ಅಮಾಯಕರು ಸಾವಿಗೀಡಾಗಿದ್ದರು. ಶಾಪಿಂಗ್  ಮಾಲ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಗಳ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ರವಾನಿಸಿ ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಿದ್ದರು.  ಅದರಂತೆ ಇಂದು ಶಂಕಿತ ಆರೋಪಿಯನ್ನು ಬಂಧಿಸಿರುವುದಾಗಿ ವಾಷಿಂಗ್ಟನ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ವಾಷಿಂಗ್ಟನ್ ನಲ್ಲಿರುವ ಓಕ್ ಹಾರ್ಬರ್ ನಲ್ಲಿ ಸ್ಥಳೀಯ ಕಾಲಮಾನ ಸಂಜೆ 7.30ರಲ್ಲಿ ಶಂಕಿತ ಆರೋಪಿ 20 ವರ್ಷದ ಸೆಟಿನ್ ನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸೆಟಿನ್ ನನ್ನು  ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com