ಬಾಗ್ದಾದ್ ನಲ್ಲಿ ಆತ್ಮಾಹುತಿ ದಾಳಿ, ಕನಿಷ್ಠ 9 ಸಾವು

ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದಾರೆ...
ಸ್ಫೋಟ ಸ್ಥಳವನ್ನು ಸ್ವಚ್ಛಗೊಳಿಸುತ್ತಿರುವ ಪೌರ ಕಾರ್ಮಿಕರು
ಸ್ಫೋಟ ಸ್ಥಳವನ್ನು ಸ್ವಚ್ಛಗೊಳಿಸುತ್ತಿರುವ ಪೌರ ಕಾರ್ಮಿಕರು
Updated on: 
ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ಬಾಗ್ದಾದ್ ನ ವಾಣಿಜ್ಯ ಪ್ರದೇಶದಲ್ಲಿ ಉಗ್ರನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಘಟನೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ ಮತ್ತು 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ಮತ್ತಷ್ಟು ಇದೇ ರೀತಿಯ ದಾಳಿಗಳನ್ನು ನಡೆಸುವುದಾಗಿ ಐಎಸ್ಐಎಸ್ ಉಗ್ರರು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com