ಪಾಕಿಸ್ತಾನ ಅಣ್ವಸ್ತ್ರಗಳು ಜಿಹಾದಿಗಳ ಕೈಸೇರಿರುವ ಸಾಧ್ಯತೆ ಇದೆ: ಹಿಲರಿ ಕ್ಲಿಂಟನ್

ಪಾಕಿಸ್ತಾನದ ಅಣ್ವಸ್ತ್ರಗಳು ಜಿಹಾದಿ ಮೂಲಭೂತವಾದಿಗಳ ಕೈಸೇರಿರುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ (ಸಂಗ್ರಹ ಚಿತ್ರ)
ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ (ಸಂಗ್ರಹ ಚಿತ್ರ)

ವಾಷಿಂಗ್ಟನ್: ಪಾಕಿಸ್ತಾನದ ಅಣ್ವಸ್ತ್ರಗಳು ಜಿಹಾದಿ ಮೂಲಭೂತವಾದಿಗಳ ಕೈಸೇರಿರುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹೇಳಿದ್ದಾರೆ.

ಖಾಸಗಿ ಮಾಧ್ಯಮವೊಂದರೊಂದಿಗೆ ಮಾತನಾಡಿರುವ ಹಿಲರಿ ಕ್ಲಿಂಟನ್, ಭಾರತದೊಂದಿಗೆ ಪರಮಾಣು ಶಸ್ತ್ರಾಸ್ತ್ರ ಪೈಪೋಟಿಗಿಳಿದಿರುವ ಪಾಕಿಸ್ತಾನ ಅತೀ ವೇಗದಲ್ಲಿ ಅಣ್ವಸ್ತ್ರ ಶಸ್ತ್ರಾಸ್ತ್ರಗಳನ್ನು  ಸಿದ್ಧಪಡಿಸುತ್ತಿದೆ. ಆದರೆ ಪಾಕಿಸ್ತಾನದ ಅಣ್ವಸ್ತ್ರಗಳು ಸುರಕ್ಷಿತವಾಗಿವೆ ಎಂದು ನನಗೆ ಅನ್ನಿಸುತ್ತಿಲ್ಲ. ಅದು ಮೂಲಭೂತವಾದಿ ಜಿಹಾದಿಗಳ ಕೈಸೇರಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದೆ ಎಂದು  ಹೇಳಿದ್ದಾರೆ.

ಸುಮಾರು 50 ನಿಮಿಷದ ಆಡಿಯೋ ಸಂದರ್ಶನದಲ್ಲಿ ತಮ್ಮ ಆತಂಕ ವ್ಯಕ್ತಪಡಿಸಿರುವ ಹಿಲರಿ, ನಾವು ಆತಂಕದ ಪರಿಸ್ಥಿತಿಯಲ್ಲಿ ಬದುಕುವಂತಾಗಿದೆ. ಪಾಕಿಸ್ತಾನ ಸರ್ಕಾರದಿಂದ ಪರಮಾಣು  ಶಸ್ತ್ರಾಸ್ತ್ರಗಳ ನಿಯಂತ್ರಣವನ್ನು ಜಿಹಾದಿ ಮೂಲಭೂತವಾದಿಗಳು ಕಸಿಯುವ ಆತಂಕ ನಿರ್ಮಾಣವಾಗಿದೆ. ಒಂದು ವೇಳೆ ಹಾಗೆ ಅಣ್ವಸ್ತ್ರ ಶಸ್ತ್ರಾಸ್ತ್ರ ಜಿಹಾದಿಗಳ ಕೈಸೇರಿದರೆ ನಾವು  ಆಲೋಚಿಸಲೂ ಆಗದಷ್ಟು ಅಗಾಧ ಪ್ರಮಾಣದ ದುರಂತ ನಡೆದುಹೋಗುತ್ತದೆ ಎಂದು ಹಿಲರಿ ಹೇಳಿದ್ದಾರೆ.

ಇದೇ ವೇಳೆ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಭಾರತ ವಿರುದ್ಧ ಅಣ್ವಸ್ತ್ರ ಪ್ರಯೋಗಿಸುವ ಹೇಳಿಕೆ ಕುರಿತಂತೆ ಮಾತನಾಡಿದ ಹಿಲರಿ, ಇದೊಂದು ನಿಜಕ್ಕೂ ಅತ್ಯಂತ  ಅಪಾಯಕಾರಿ ಬೆಳವಣಿಗೆಯಾಗಿದೆ. ಇದನ್ನು ಕೂಡಲೇ ನಿಯಂತ್ರಿಸುವ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com