ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಯುಎನ್ ಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮೂನ್

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಸೇನಾ ಪ್ರಧಾನ ಕಚೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್-ಕಿ-ಮೂನ್ ಖಂಡಿಸಿದ್ದಾರೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್-ಕಿ-ಮೂನ್
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್-ಕಿ-ಮೂನ್

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಸೇನಾ ಪ್ರಧಾನ ಕಚೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್-ಕಿ-ಮೂನ್ ಖಂಡಿಸಿದ್ದಾರೆ.

ಉಗ್ರರ ಕೃತ್ಯದ ಬಗ್ಗೆ ಮಾತನಾಡಿರುವ ಬಾನ್-ಕಿ-ಮೂನ್, ಸೈನಿಕರ ಸಾವಿಗೆ ಕಾರಣರಾಗಿರುವ ಭಯೋತ್ಪಾದಕರಿಗೆ ತಕ್ಕ ಶಿಕ್ಷೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಾಶ್ಮೀರದಲ್ಲಿ 20 ಸೈನಿಕರ ಹತ್ಯೆಗೆ ಕಾರಣವಾದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಹ ಖಂಡಿಸಿದ್ದು, ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ದಾಳಿ ನಡೆಸಿದವರಿಗೆ ಸಿಗಬೇಕಾದ ಶಿಕ್ಷೆಯನ್ನು ನೀಡುತ್ತೇವೆ ಎಂಬ ಮಾತುಗಳನ್ನಾಡಿದ್ದಾರೆ.

ಕಾಶ್ಮೀರದಲ್ಲಿ ನಡೆದಿರುವ ಭೀಭತ್ಸ ದಾಳಿ ಬಗ್ಗೆ ವಿಶ್ವ ಸಂಸ್ಥೆ ಕಾರ್ಯದರ್ಶಿ ಬಾನ್-ಕಿ- ಮೂನ್ ನೀಡಿರುವ ಹೇಳಿಕೆ, ಭಯೋತ್ಪಾದನೆ ನಿಗ್ರಹದ ಕುರಿತು ಇತ್ತೀಚೆಗಷ್ಟೇ ವಿಶ್ವಸಂಸ್ಥೆಗೆ ಭಾರತ ಬಿಸಿ ಮುಟ್ಟಿಸಿದ್ದ ಘಟನೆಯನ್ನು ನೆನಪಿಸುತ್ತಿದೆ. ವಿಶ್ವ ಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ ನಡೆದ ಅಫ್ಘಾನಿಸ್ತಾನದ ಮೇಲಿನ ಚರ್ಚೆಯಲ್ಲಿ, ಭಯೋತ್ಪಾದನೆ ನಿರ್ಮೂಲನೆ ವಿಚಾರದಲ್ಲಿ ವಿಶ್ವಸಂಸ್ಥೆ ಕೈಗೊಳ್ಳುತ್ತಿರುವ ಕ್ರಮಗಳು ಸಾಲದು, ಪಾಕಿಸ್ತಾನದ ಬೆಂಬಲ ಪಡೆದು ಅಫ್ಘಾನಿಸ್ತಾನದಲ್ಲಿ ನಿರಂತರ ದಾಳಿ ನಡೆಸುತ್ತಿರುವ, ಶಾಂತಿಗೆ ಧಕ್ಕೆ ಉಂಟು ಮಾಡಿರುವ ತಾಲಿಬಾನ್ ಉಗ್ರ ಸಂಘಟನೆಯ ಮುಖಂಡನನ್ನು ತಪ್ಪಿಸಿಕೊಳ್ಳಲು ಸಹಾಯವಾಗುವಂತೆ ವಿಶ್ವಸಂಸ್ಥೆ ವರ್ತಿಸಿದೆ ಎಂದು ಭಾರತ ಗುಡುಗಿತ್ತು. ಇದಾದ ಕೆಲವೇ ದಿನಗಳಲ್ಲಿ ಕಾಶ್ಮೀರದ ಸೇನಾ ಕಚೇರಿ ಮೇಲೆ ದಾಳಿ ನಡೆದಿದ್ದು, ವಿಶ್ವ ಸಂಸ್ಥೆ ಭಯೋತ್ಪಾದನೆ ನಿರ್ಮೂಲನೆಗೆ ಈಗಲಾದರೂ ಕಠಿಣ ಕ್ರಮ ಕೈಗೊಳ್ಳಲಿದೆಯೇ ಎಂದು ಕಾದುನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com