ಟೆಕ್ನೊಲಾಜಿಚೆಸ್ಕಿ ಇನ್‌ಸ್ಟಿಟ್ಯೂಟ್ ನಿಲ್ದಾಣ
ವಿದೇಶ
ರಷ್ಯಾ ಮೆಟ್ರೊ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್ ಮೆಟ್ರೊ ಸುರಂಗ ಮಾರ್ಗದಲ್ಲಿ ಸೋಮವಾರ ಸಂಭವಿಸಿದ ಅವಳಿ ಸ್ಫೋಟ ಪ್ರಕರಣದಲ್ಲಿ....
ಸೇಂಟ್ ಪೀಟರ್ಸ್‌ಬರ್ಗ್: ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್ ಮೆಟ್ರೊ ಸುರಂಗ ಮಾರ್ಗದಲ್ಲಿ ಸೋಮವಾರ ಸಂಭವಿಸಿದ ಅವಳಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ರಷ್ಯಾದ ಆರೋಗ್ಯ ಸಚಿವರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 14 ಮಂದಿ ಮೃತಪಟ್ಟಿದ್ದು, ಗಾಯಗೊಂಡ 49 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ವೆರೊನಿಕಾ ಸ್ಕೊತ್ಸೋವಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸೆನ್ನಾಯ ಪ್ಲೊಶ್‌ಚೆಡ್ ಮತ್ತು ಟೆಕ್ನೊಲಾಜಿಚೆಸ್ಕಿ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವಿನ ಸುರಂಗದಲ್ಲಿ ನಿನ್ನೆ ಅವಳಿ ಬಾಂಬ್ ಸ್ಫೋಟಗೊಂಡಿತ್ತು. ಎರಡು ರೈಲುಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಸೇಂಟ್ ಪೀಟರ್ಸ್‌ಬರ್ಗ್‌ನ ತುರ್ತುಸೇವಾ ವಿಭಾಗ ಮಾಹಿತಿ ನೀಡಿತ್ತು. ಅಲ್ಲದೆ ಸ್ಫೋಟಕ ವಸ್ತುವೊಂದನ್ನು ಮೆಟ್ರೊ ರೈಲಿನಲ್ಲಿ ಸಾಗಿಸಲಾಗಿದೆ ಎಂದು ಭಯೋತ್ಪಾದನಾ ನಿಗ್ರಹ ಸಮಿತಿ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ