ಸಿರಿಯಾ ಮೇಲೆ ಕ್ಷಿಪಣಿ ದಾಳಿ; ಅಮೆರಿಕ ನ್ಯಾಯಕ್ಕಾಗಿ ನಿಲ್ಲುತ್ತದೆ ಎಂದ ಡೊನಾಲ್ಡ್ ಟ್ರಂಪ್

ಸಿರಿಯಾದ ಸೇನಾ ನೆಲೆಗಳ ಮೇಲೆ ಅಮೆರಿಕ ಸೇನೆ ನಡೆಸುತ್ತಿರುವ ಕ್ಷಿಪಣಿ ದಾಳಿಯನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕ ದೇಶ ನ್ಯಾಯಕ್ಕಾಗಿ ನಿಂತಿದೆ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಸಿರಿಯಾದ ಸೇನಾ ನೆಲೆಗಳ ಮೇಲೆ ಅಮೆರಿಕ ಸೇನೆ ನಡೆಸುತ್ತಿರುವ ಕ್ಷಿಪಣಿ ದಾಳಿಯನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕ ದೇಶ ನ್ಯಾಯಕ್ಕಾಗಿ ನಿಂತಿದೆ ಎಂದು ಹೇಳಿದ್ದಾರೆ.

ಗುರುವಾರ ರಾತ್ರಿ ಸಿರಿಯಾದ ಸೇನಾ ನೆಲೆಗಳ ಮೇಲೆ ಅಮೆರಿಕ ನಡೆಸುತ್ತಿರುವ ದಾಳಿ ಕುರಿತಂತೆ ವಿಶ್ವಸಮುದಾಯವನ್ನು ಉದ್ದೇಶಿಸಿ ಫ್ಲೋರಿಡಾದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಸಿರಿಯಾದಲ್ಲಿ ನಡೆಯುತ್ತಿರುವ  ರಕ್ತಪಾತವನ್ನು ಕೊನೆಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ವಿಶ್ವ ಸಮುದಾಯ ಅಮೆರಿಕದೊಂದಿಗೆ ಕೈಜೋಡಿಸಬೇಕಿದ್ದು, ಸಿರಿಯಾದಲ್ಲಿ ನಡೆಯುತ್ತಿರುವ ಅಮಾನವೀಯ ದಾಳಿಗಳನ್ನು ಹತ್ತಿಕ್ಕಬೇಕಿದೆ ಎಂದು ಹೇಳಿದರು. ಇದೇ ವೇಳೆ  ಸಿರಿಯಾದ ಸೇನಾ ನೆಲೆಗಳ ಮೇಲೆ ಅಮೆರಿಕ ಸೇನೆ ನಡೆಸುತ್ತಿರುವ ಕ್ಷಿಪಣಿ ದಾಳಿ ಅಮಾಯಕ ನಾಗರಿಕರ ಸಾವಿನ ಪ್ರತೀಕಾರ ಮತ್ತು ಮಾನವೀಯತೆ ಉಳಿವಿಗಾಗಿ ಅಮೆರಿಕದ ಹೋರಾಟ ಎಂದು ಟ್ರಂಪ್ ಬಣ್ಣಿಸಿದ್ದಾರೆ.

‘‘ಮಂಗಳವಾರ ಸಿರಿಯಾದ ಸರ್ವಾಧಿಕಾರಿ ಬಶರ್ ಅಲ್ ಅಸ್ಸಾದ್ ಅಮಾಯಕ ನಾಗರೀಕರ ಮೇಲೆ ವಿಷಾನಿಲ ಬಾಂಬ್ ಮೂಲಕ ದಾಳಿ ಮಾಡಿದ್ದಾರೆ. ಸಿರಿಯಾದಲ್ಲಿ ನಾಗರಿಕರ ಮೇಲೆ ನಡೆದಿರುವ ದಾಳಿಯನ್ನು ಸಹಿಸಿಕೊಳ್ಳಲು  ಸಾಧ್ಯವಿಲ್ಲ. ಇಂತಹ ಘಟನೆಗಳು ಮರುಕಳಿಸಬಾರದು ಮತ್ತು ಅಮೆರಿಕ ಅದಕ್ಕೆ ಅವಕಾಶ ನೀಡುವುದಿಲ್ಲ. ಸಿರಿಯಾದಲ್ಲಿ ಶಾಂತಿ ನೆಲೆಸುವವರೆಗೂ ಮತ್ತು ಅಮಾಯಕರ ಸಾವಿಗೆ ನ್ಯಾಯ ಸಿಗುವವರೆಗೂ ಅಮೆರಿಕ ತನ್ನ ಹೋರಾಟ  ನಿಲ್ಲಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com