ಈಜಿಪ್ಟ್ ನ ಚರ್ಚ್ ಮೇಲೆ ಉಗ್ರ ದಾಳಿ; ಸಾವಿನ ಸಂಖ್ಯೆ 26ಕ್ಕೆ ಏರಿಕೆ

ಈಜಿಪ್ಟ್ ನ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೈರೋ: ಈಜಿಪ್ಟ್ ನ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

ಈಜಿಪ್ಟ್ ನ ಟಂಟಾ ನಗರದ ನೈಲ್ ಡೆಲ್ಟಾದ ಚರ್ಚ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅಂತೆಯೇ ಘಟನೆಯಲ್ಲಿನ ಗಾಯಾಳುಗಳ ಸಂಖ್ಯೆ ಕೂಡ 63ಕ್ಕೆ ಏರಿಕೆಯಾಗಿದ್ದು,  ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತಿಲ್ಲವಾದರೂ, ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಉಗ್ರರೇ ದಾಳಿ  ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪ್ರಸ್ತುತ ಈಜಿಪ್ಟ್ ಪೊಲೀಸರು ಶಂಕಿತ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ. ಪ್ರಸಕ್ತ ವರ್ಷ ಕ್ರಿಶ್ಚಿಯನ್ ಅಲ್ಪ ಸಂಖ್ಯಾತರ ಮೇಲೆ ಈಜಿಪ್ಟ್ ನಲ್ಲಿ ನಡೆಯುತ್ತಿರುವ ಮೊದಲ ದಾಳಿ ಇದಾಗಿದೆ  ಎಂದು ಹೇಳಲಾಗುತ್ತಿದೆ.

ಕಳೆದ ಡಿಸೆಂಬರ್ ನಲ್ಲಿ ಈಜಿಪ್ಟ್ ರಾಜಧಾನಿ ಕೈರೋದ ಕಾಪ್ಟಿಕ್ ಕ್ಯಾಥೆಡ್ರಿಲ್ ನಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿ 49ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಹಲವು ಮಕ್ಕಳು  ಮಹಿಳೆಯರು ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com