ಗೂಢಚಾರಿಕೆ ಮಾಡಿದ ಆರೋಪದ ಮೇಲೆ ಕಳೆದ ವರ್ಷ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದ ಪಾಕಿಸ್ತಾನ, ನಿನ್ನೆ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಆದರೆ ಪಾಕಿಸ್ತಾನದ ಈ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದೊಂದು ಪೂರ್ವ ಯೋಜಿತ ಕೊಲೆ ಎಂದಿದೆ. ಅಲ್ಲದೆ ಜಾಧವ್ ಗಲ್ಲು ಶಿಕ್ಷೆ ಜಾರಿಗೊಳಿಸಿದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಇಸ್ಲಾಮಾಬಾದ್ ಅರಿತುಕೊಳ್ಳಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇಂದು ಎಚ್ಚರಿಕೆ ನೀಡಿದ್ದಾರೆ.