ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಬಗ್ಗೆ ಪ್ರಶ್ನೆಗೆ ಉತ್ತರಿಸದೇ ಜಾರಿಕೊಂಡ ವಿಶ್ವಸಂಸ್ಥೆ

ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ಗಲ್ಲು ವಿಧಿಸಿರುವುದರ ಬಗ್ಗೆ ಉತ್ತರಿಸಲು ನಿರಾಕರಿಸಿರುವ ವಿಶ್ವಸಂಸ್ಥೆ, ಪ್ರಕರಣದ ಬಗ್ಗೆ ನಿರ್ಧರಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದೆ.
ಕುಲಭೂಷಣ್ ಜಾಧವ್
ಕುಲಭೂಷಣ್ ಜಾಧವ್
Updated on: 
ವಿಶ್ವಸಂಸ್ಥೆ: ಪಾಕಿಸ್ತಾನ ಕುಲಭೂಷಣ್ ಜಾಧವ್  ಗೆ ಗಲ್ಲು ವಿಧಿಸಿರುವುದರ ಬಗ್ಗೆ ಉತ್ತರಿಸಲು ನಿರಾಕರಿಸಿರುವ ವಿಶ್ವಸಂಸ್ಥೆ, ಪ್ರಕರಣದ ಬಗ್ಗೆ ನಿರ್ಧರಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದೆ. 
ಪ್ರಕರಣದ ಬಗ್ಗೆ ಸ್ಪಷ್ಟ ನಿರ್ಣಯ ಕೈಗೊಳ್ಳುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ವಕ್ತಾರರು ಹೇಳಿರುವುದನ್ನು ಡಾನ್ ಪತ್ರಿಕೆ ವರದಿ ಮಾಡಿದೆ. ಒಟ್ಟಾರೆಯಾಗಿ ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧ ಸುಧಾರಿಸಬೇಕು ಹಾಗೂ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂಬುದು ವಿಶ್ವಸಂಸ್ಥೆಯ ನಿಲುವಾಗಿದೆ ಎಂದಷ್ಟೇ ತಿಳಿಸಿದೆ. 
ಕುಲಭೂಷಣ್ ಜಾಧವ್ ಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆಯನ್ನು ತಕ್ಷಣವೇ ಜಾರಿಗೆ ತರಲಾಗುವುದಿಲ್ಲ ಎಂದು ಪಾಕಿಸ್ತಾನ ರಕ್ಶಣಾ ಸಚಿವ ಖವಾಜ ಮೊಹಮ್ಮದ್ ಆಸೀಫ್ ಹೇಳಿದ್ದರು. ಭಾರತವೂ ಸಹ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನೆ ಮಾಡಿದ್ದು, ಅಮೆರಿಕಾ ಸಹ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ಪ್ರಕಟಿಸಿರುವುದನ್ನು ಪ್ರಶ್ನಿಸಿದ್ದರೆ ವಿಶ್ವಸಂಸ್ಥೆ ಮಾತ್ರ ಈ ಬಗ್ಗೆ ಉತ್ತರಿಸಲು ನಿರಾಕರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com