ಎಲ್ ಒಸಿ ಬಳಿ ಕದನ ವಿರಾಮ ಉಲ್ಲಂಘನೆ: ಭಾರತಕ್ಕೆ ಪಾಕ್ ಸಮನ್ಸ್

ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿ ಮಂಗಳವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಇಸ್ಲಾಮಾಬಾದ್: ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿ ಮಂಗಳವಾರ ಪಾಕಿಸ್ತಾನ ಭಾರತದ ಡೆಪ್ಯೂಟಿ ಹೈ ಕಮೀಷನರನ್ನು ಕರೆಯಿಸಿಕೊಂಡು ಪ್ರತಿಭಟನೆ ವ್ಯಕ್ತಪಡಿಸಿದೆ.
ಮಹಾ ನಿರ್ದೇಶಕ(ದಕ್ಷಿಣ ಏಷ್ಯಾ ಮತ್ತು ಸಾರ್ಕ್) ಡಾ. ಮೊಹಮ್ಮದ್ ಫೈಸಾಲ್ ಅವರು ಭಾರತದ ಡೆಪ್ಯೂಟಿ ಹೈ ಕಮೀಷನರ್ ಜೆ ಪಿ ಸಿಂಗ್ ಅವರನ್ನು ಕರೆಯಿಸಿಕೊಂಡು ಭಾರತೀಯ ಸೇನೆಯ ಅಪ್ರಚೋದಿತ ಗುಂಡಿನ ದಾಳಿಯನ್ನು ಖಂಡಿಸಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ತಿಳಿಸಿದೆ.
ನಿನ್ನೆ ಕರೆಲಾ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 35 ವರ್ಷದ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದಾರೆ ಎಂದು ಪಾಕ್ ಹೇಳಿಕೊಂಡಿದೆ.
ಉದ್ದೇಶಪೂರ್ವಕವಾಗಿ ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುವುದು ನಿಜಕ್ಕೂ ಮಾನವೀಯ ಮತ್ತು ಮಾನವ ಹಕ್ಕುಗಳ ಹಾಗೂ ಮಾನವೀಯ ಕಾನೂನುಗಳಿಗೆ ವಿರುದ್ಧವಾಗಿದೆ ಎಂದು ಪಾಕ್ ವಿದೇಶಾಂಗ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com