ಉತ್ತರ ಚೀನಾದಲ್ಲಿ ಭೀಕರ ಬಸ್ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಬಸ್ ನಲ್ಲಿದ್ದ 36 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ 13 ಮಂದಿಗೆ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...
ಬೀಜಿಂಗ್: ಉತ್ತರ ಚೀನಾದಲ್ಲಿ ಭೀಕರ ಬಸ್ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಬಸ್ ನಲ್ಲಿದ್ದ 36 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ 13 ಮಂದಿಗೆ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
49ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಶಾಂಕ್ಸಿ ಪ್ರಾಂತ್ಯದಲ್ಲಿರುವ ಕ್ವಿನ್ಲಿಂಗ್ ಸುರಂಗ ಮಾರ್ಗದ ಗೋಡೆಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 39 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಚೆಂಗ್ಡು ನಿಂದ ನೈರುತ್ಯ ಸಿಚುವಾನ್ ಪ್ರಾಂತ್ಯದತ್ತ ಬಸ್ ತೆರಳುತ್ತಿತ್ತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿದೆ ಎಂದು ಹೇಳಲಾಗುತ್ತಿದೆ.
ಸ್ಥಳೀಯ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, 51 ಮಂದಿಯನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದ ಬಸ್ ನಲ್ಲಿ 49 ಮಂದಿಯನ್ನು ಹೊತ್ತೊಯ್ಯಲಾಗುತ್ತಿದ್ದು. ಇಬ್ಬರು ಮಕ್ಕಳು ಸೇರಿದಂದೆ ಮಹಿಳೆಯರೂ ಬಸ್ಸಿನಲ್ಲಿದ್ದರು ಎಂದು ತಿಳಿಸಿವೆ.