ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಿರುವುದು ಹೆಮ್ಮೆಯೆನಿಸುತ್ತಿದೆ: ಟ್ರಂಪ್ ಪುತ್ರಿ ಇವಾಂಕ

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕ ಟ್ರಂಪ್ ಅವರು ಶುಕ್ರವಾರ ಹೇಳಿದ್ದಾರೆ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪುತ್ರಿ ಇವಾಂಕ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪುತ್ರಿ ಇವಾಂಕ ಟ್ರಂಪ್
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕ ಟ್ರಂಪ್ ಅವರು ಶುಕ್ರವಾರ ಹೇಳಿದ್ದಾರೆ. 
ಭಾರತ ಮತ್ತು ಅಮೆರಿಕಾ ಜಂಟಿ ಸಹಭಾಗಿತ್ವದಲ್ಲಿ ನ. 28-30ರವರೆಗೆ 3 ದಿನಗಳ ಕಾಲ ಹೈದರಾಬಾದ್ ನಲ್ಲಿ ಜಾಗತಿಕ ವಾಣಿಜ್ಯೋದ್ಯಮ ಶೃಂಗಸಬೆ (ಜಿಇಎಸ್) ನಡೆಯಲಿದೆ. ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ನೇತೃತ್ವದ ನಿಯೋಗ ಭಾಗವಹಿಸಲಿದೆ. ಇವಾಂಕ್ ಅವರು ಟ್ರಂಪ್ ಅವರ ಸಲಹೆಗಾರ್ತಿಯಾಗಿದ್ದಾರೆ. 
ಕಳೆದ ಜೂನ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಷಿಂಗ್ಟನ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಇವಾಂಕ ಟ್ರಂಪ್ ಅವರನ್ನು ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದರು. 
ಪ್ರಧಾನಿ ಮೋದಿಯವರ ಆಹ್ವಾನ ಕುರಿತಂತೆ ಸಂಸದ ವ್ಯಕ್ತಪಡಿಸಿ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ವಿಷಯವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಇವಾಂಕಾ ಅವರು, ಸಭೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ. 
ಇವಾಂಕ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಈ ಬಾರಿ ಭಾರತದಲ್ಲಿ ನಡೆಯುವ ಉದ್ಯಮಿಗಳ ಶೃಂಗದಲ್ಲಿ ಮಹಿಳಾ ಉದ್ಯಮಿಗಳ ಬೆಂಬಲಿಗಳಾಗಿ ಇವಾಂಕಾ ಭಾಗಿಯಾಗುತ್ತಿದ್ದಾರೆಂದು ಹೇಳಿದ್ದಾರೆ. 
ಮೋದಿಯವರು ಕೂಡ ಇದಕ್ಕೆ ಪ್ರತಿಕ್ರಿಯೆ ನೀಡಿ ಇವಾಂಗಾ ಅವರನ್ನು ಸ್ವಾಗತಿಸಿದ್ದಾರೆ. ಇವಾಂಕಾ ಅವರನ್ನು ಎದುರು ನೋಡುತ್ತಿದ್ದೇನೆಂದು ಟ್ವೀಟ್ ಮಾಡಿದ್ದಾರೆ. 
ಈ ನಡುವೆ ಅಮೆರಿಕ ಕೂಡ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆಂದು ಹೇಳಿಕೊಂಡಿದೆ. 
ಅಮೆರಿಕ ರಾಷ್ಟ್ರದ ವರ್ಕಾರ ಹೇದರ್ ನೌರ್ಟ್ ಅವರು ಈ ಕುರಿತಂತೆ ಹೇಳಿಕೆ ನೀಡಿದ್ದು, ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನದ ಸಂಬಂಧಗಳು ಪ್ರಗತಿಪರವಾಗಿವೆ. ನಾವು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆಂದು ಹರ್ಷ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com