ವಿವಾದಿತ ಡೋಕ್ಲಾಮ್ ಬಳಿ ರಕ್ತದಾನ ಶಿಬಿರ ಏರ್ಪಡಿಸಿದ ಚೀನಾ

ಡೋಕ್ಲಾಮ್ ವಿವಾದ ಸಂಬಂಧ ಭಾರತದೊಂದಿಗೆ ಸಂಘರ್ಷಕ್ಕಿಳಿಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿರುವ ಚೀನಾ, ವಿವಾದಿತ ಪ್ರದೇಶದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಪ್ರಚೋದನಾತ್ಮಕ ವರ್ತನೆಯನ್ನು ತೋರಿದೆ ಎಂದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೀಜಿಂಗ್: ಡೋಕ್ಲಾಮ್ ವಿವಾದ ಸಂಬಂಧ ಭಾರತದೊಂದಿಗೆ ಸಂಘರ್ಷಕ್ಕಿಳಿಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿರುವ ಚೀನಾ, ವಿವಾದಿತ ಪ್ರದೇಶದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಪ್ರಚೋದನಾತ್ಮಕ ವರ್ತನೆಯನ್ನು ತೋರಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ನೀಡಿದ ಸೂಚನೆ ಮೇರಿಗೆ ಹುನಾನ್ ಪ್ರದೇಶದ ಛಂಗ್ಶಾ ಆಸ್ಪತ್ರೆಯೊಂದು ಗಡಿಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ ಎಂದು ಚೀನಾ ಸರ್ಕಾರಿ ಒಡೆತನದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ. 
ಆಗಸ್ಟ್ 8 ರಂದು ಚೀನಾದ ಸಿಚುವಾನ್ ಪ್ರಾಂತ್ಯದ ಜಿಯುಜಾಯ್ ಗಾವು ಕೌಂಟಿಯಲ್ಲಿ ಭಾರೀ ಭೂಕಂಪವೊಂದು ಸಂಭವಿಸಿತ್ತು. ಭೂಕಂಪ ಪರಿಣಾಮ ಹಲವಾರು ಮಂದಿ ಗಾಯಗೊಂಡಿದ್ದರು. ಪ್ರಸ್ತುತ ಗಡಿಯಲ್ಲಿ ಸಂಗ್ರಹ ಮಾಡಿರುವ ರಕ್ತವನ್ನು ಭೂಕಂಪದಲ್ಲಿ ಗಾಯಗೊಂಡಿರುವ ಸಂತ್ರಸ್ತರ ಜನರಿಗೆ ರವಾನೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ. 
ಸಿಕ್ಕಿಂ ಗಡಿಯಲ್ಲಿ, ಭೂತಾನ್-ಭಾರತ ಮತ್ತು ಚೀನಾ ಟ್ರೈಜಂಕ್ಷನ್ ಪ್ರದೇಶದಲ್ಲಿರುವ ಡೋಕ್ಲಾಮ್ ನಲ್ಲಿ ಚೀನಾ ಕೈಗೊಂಡ ವಿವಾದಾತ್ಮಕ ರಸ್ತೆ ನಿರ್ಮಾಣ ಕಾರ್ಯವನ್ನು ಕಳೆದ ಮಾರ್ಚ್ 16 ರಂದು ಭಾರತೀಯ ಸೇನೆ ನಿಲ್ಲಿಸಿತ್ತು. ಪರಿಣಾಮವಾಗಿ ಉಭಯ ದೇಶಗಳ ನಡುವೆ ಸೇನಾ ಮುಖಾಮುಖೀ ಘರ್ಷಣೆ ಉಂಟಾಗಿ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com