ಕಾಬೂಲ್: ಆಫ್ಗಾನಿಸ್ತಾನದ ಕಾಬುಲ್ ನಗರದಲ್ಲಿರುವ ಇಮಾಮ್ ಜಮಾನ್ ಶಿಯಾ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ 30 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಪ್ರಾರ್ಥನೆ ವೇಳೆ ಮಸೀದಿಯ ಮುಂಭಾಗದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಇದರಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಾಲ್ವರು ಆತ್ಮಾಹುತಿ ಬಾಂಬ್ ದಾಳಿಕೋರರು ಮೊದಲಿಗೆ ಗ್ರೆನೆಡ್ ಬಾಂಬ್ ಗಳನ್ನು ಎಸೆದಿದ್ದಾರೆ. ನಂತರ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಇನ್ನು ಮಸೀದಿ ಮೇಲಿನ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.