ಟೆಕ್ಸಾಸ್‌ ಪ್ರವಾಹ: ಸಂಕಷ್ಟದಲ್ಲಿ ಭಾರತೀಯ ವಿದ್ಯಾರ್ಥಿಗಳು

ಹಾರ್ವೆ ಚಂಡಮಾರುತದ ಪ್ರಭಾವದಿಂದ ಟೆಕ್ಸಾಸ್‌ ನಲ್ಲಿ ಪ್ರವಾಹ ಪರಿಸ್ಥಿತಿ ಉಂತಾಗಿದೆ. ಸುಮಾರು 1.3 ಕೋಟಿ ಜನರು ಅಪಾಯದಲ್ಲಿ ಸಿಲುಕಿದ್ದಾರೆ.
ಟೆಕ್ಸಾಸ್‌ ಪ್ರವಾಹ
ಟೆಕ್ಸಾಸ್‌ ಪ್ರವಾಹ
ಹ್ಯೂಸ್ಟನ್‌: ಹಾರ್ವೆ ಚಂಡಮಾರುತದ ಪ್ರಭಾವದಿಂದ ಟೆಕ್ಸಾಸ್‌ ನಲ್ಲಿ ಪ್ರವಾಹ ಪರಿಸ್ಥಿತಿ ಉಂತಾಗಿದೆ. ಸುಮಾರು 1.3 ಕೋಟಿ ಜನರು ಅಪಾಯದಲ್ಲಿ ಸಿಲುಕಿದ್ದಾರೆ. ಟೆಕ್ಸಾಸ್‌ ಕರಾವಳಿಯಲ್ಲಿರುವ ನಗರದ ಬೀದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ, ಈಗಾಗಲೇ ಪ್ರವಾಹಕ್ಕೆ ಸಿಲುಕಿ ಒಂಭತ್ತು ಮಂದಿ ಬಲಿಯಾಗಿದ್ದಾರೆ.
ಹೂಸ್ಟನ್‌ ವಿಶ್ವವಿದ್ಯಾಲಯದ ಕ್ಯಾಂಪಸ್‌ ಸಂಪೂರ್ಣ ಮುಳುಗಿದೆ. ಇಲ್ಲಿ ಅಭ್ಯಾಸ ನಡೆಸುತ್ತಿರುವ 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಅವರಲ್ಲಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ತಿಳಿಸಿದರು.
ಇಬ್ಬರು ಭಾರತೀಯ ವಿದ್ಯಾರ್ಥಿಗಳಾದ ಶಾಲಿನಿ ಮತ್ತು ನಿಖಿಲ್‌ ಭಾಟಿಯಾ ಅವರನ್ನು ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಅವರಿಗೆ ನೆರವಾಗಲು ಭಾರತೀಯ ಕಾನ್ಸುಲೇಟ್‌ ಜನರಲ್‌ ನಿರುಪಮ್‌ ರಾಯ್‌ ಆಸ್ಪತ್ರೆಗೆ ಧಾವಿಸಿದ್ದಾರೆ ಎಂದು ಸಚಿವೆ ಸುಷ್ಮಾ ಟ್ವೀಟ್‌ ಮಾಡಿದ್ದಾರೆ.
ಮುಂದಿನ ಎರಡು ದಿನಗಳ ಕಾಲವೂ ದಾಖಲೆ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com