ಪಾಕಿಸ್ತಾನಕ್ಕೆ ಅಮೆರಿಕದಿಂದ 225 ಮಿಲಿಯನ್ ಡಾಲರ್ ಮೊತ್ತದ ನೆರವು: ಷರತ್ತು ಅನ್ವಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಪಾಕಿಸ್ತಾನಕ್ಕೆ ಷರತ್ತುಬದ್ಧ 225 ಮಿಲಿಯನ್ ಡಾಲರ್ ಮೊತ್ತದ ನೆರವು ನೀಡುವುದಕ್ಕೆ ಅಧಿಸೂಚನೆ ಹೊರಡಿಸಿದೆ.
ಅಮೆರಿಕ
ಅಮೆರಿಕ
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಪಾಕಿಸ್ತಾನಕ್ಕೆ ಷರತ್ತುಬದ್ಧ 225 ಮಿಲಿಯನ್ ಡಾಲರ್ ಮೊತ್ತದ ನೆರವು ನೀಡುವುದಕ್ಕೆ ಅಧಿಸೂಚನೆ ಹೊರಡಿಸಿದೆ. 
ಭಯೋತ್ಪಾದಕ ಸಂಘಟನೆಗಳ ವಿರುದ್ಧ ಪಾಕಿಸ್ತಾನ ಪರಿಣಾಮಕಾರಿಯಾಗಿ ಹೋರಾಟ ಮಾಡಿದರೆ ಮಾತ್ರ 225 ಮಿಲಿಯನ್ ಡಾಲರ್ ಮೊತ್ತದ ನೆರವು ಪಡೆಯಲು ಸಾಧ್ಯ ಎಂಬ ಷರತ್ತು ವಿಧಿಸಲಾಗಿದೆ. ಭಯೋತ್ಪಾದಕರಿಗೆ ಪಾಕಿಸ್ತಾನ ಆಶ್ರಯ ನೀಡುತ್ತಿದೆ ಎಂದು ಪಾಕ್ ವಿರುದ್ಧ ಡೊನಾಲ್ಡ್ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನಕ್ಕೆ ಅಮೆರಿಕ ಷರತ್ತುಬದ್ಧ ಆರ್ಥಿಕ ನೆರವು ನೀಡುವುದರ ಬಗ್ಗೆ ಘೋಷಿಸಿದೆ. 
ಆ.30 ರಂದು ಟ್ರಂಪ್ ಆಡಳಿತ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸುತ್ತಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಂಡರೆ ಮಾತ್ರ ನೆರವು ಪಡೆಯಬಹುದಾಗಿದೆ ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com