ಪಾಕಿಸ್ತಾನದಲ್ಲಿ ಚೀನಾ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಾವಿರಾರು ಚೀನೀಯರು ಪಾಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಬೆಲ್ಟ್ ಅಂಡ್ ರೋಡ್ ಯೋಜನೆಯಡಿ 6000 ಕೋಟಿ ಡಾಲರ್ ಮೌಲ್ಯದ ಮೂಲಸೌಕರ್ಯ ಯೋಜನೆಗಳು ನಿರ್ಮಾಣ ಹಂತದಲ್ಲಿವೆ. ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಂದರು ಮತ್ತು ರಸ್ತೆ ನಿರ್ಮಾಣ ಯೋಜನೆಗಳ ಮೇಲೆ ಸತತ ಉಗ್ರರ ದಾಳಿಯೂ ನಡೆಯುತ್ತಿದೆ.