ಪಾಕಿಸ್ತಾನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮತ್ತೊಮ್ಮೆ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದು, ಕಾಶ್ಮೀರವನ್ನು ಪ್ಯಾಲೆಸ್ತೀನ್ ಬಿಕ್ಕಟ್ಟಿಗೆ ಹೋಲಿಸಿದೆ. ಈ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮುಕ್ತಚರ್ಚೆಯಲ್ಲಿ ಮಾತನಾಡಿದ ಪಾಕಿಸ್ತಾನದ ವಿಶ್ವಸಂಸ್ಥೆ ರಾಯಭಾರಿ ಮಲೀಹಾ ಲೋಧಿ ಅವರು, ಕಾಶ್ಮೀರದಲ್ಲಿನ ‘ಅನಾಹುತಕಾರಿ’ ಪರಿಸ್ಥಿತಿಯನ್ನು ತಿಳಿಗೊಳಿಸುವ ಬದಲು ಜಗತ್ತು ಸುಮ್ಮನೆ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ.