ರಷ್ಯಾ ಅಧ್ಯಕ್ಷೀಯ ಚುನಾವಣೆ: ಪುಟಿನ್ ವಿರುದ್ಧ ನಾವಲ್ನಿ ಸ್ಪರ್ಧೆ!

ತೀವ್ರ ಕುತೂಹಲ ಕೆರಳಿಸಿರುವ ರಷ್ಯಾ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಾಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ತಾವು ಸ್ಪರ್ಧಿಸುವುದಾಗಿ ಪ್ರತಿಪಕ್ಷ ನಾಯಕ ಅಲೆಕ್ಸೀ ನಾವಲ್ನಿ ಘೋಷಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಾಸ್ಕೋ: ತೀವ್ರ ಕುತೂಹಲ ಕೆರಳಿಸಿರುವ ರಷ್ಯಾ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಾಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ತಾವು ಸ್ಪರ್ಧಿಸುವುದಾಗಿ ಪ್ರತಿಪಕ್ಷ ನಾಯಕ ಅಲೆಕ್ಸೀ ನಾವಲ್ನಿ ಘೋಷಿಸಿದ್ದಾರೆ.
ಈ ಬಗ್ಗೆ ಭಾನುವಾರ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿರುವ ಪ್ರತಿಪಕ್ಷ ನಾಯಕ ಅಲೆಕ್ಸೀ ನಾವೆಲ್ನೀ ಅವರು, ಇದೇ ಮಾರ್ಚ್ ನಲ್ಲಿ ನಡೆಯಲಿರುವ ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಅಂತೆಯೇ ಅಧ್ಯಕ್ಷೀಯ ಸ್ಪರ್ಧೆಗೆ ಸಂಬಂಧಿಸಿದಂತೆ ತಮ್ಮ ಪಕ್ಷ ಹಾಗೂ ತಾವು ಚುನಾವಣೆಗೆ ಎಲ್ಲ ರೀತಿಯಸಿದ್ಧತೆಗಳನ್ನು ಪೂರ್ಣಗೊಳಿಸಿದ್ದೇವೆ ಎಂದೂ ಹೇಳಿದ್ದಾರೆ.
ಅಂತೆಯೇ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಅಗತ್ಯವಿರುವ ಜನಪ್ರತಿನಿಧಿಗಳ ಸಹಿಗಳನ್ನು ತಾವು ಸಂಗ್ರಹಿದ್ದು, ಈಗಾಗಲೇ ರಷ್ಯಾದ 20 ನಗರಗಳ ಯಾತ್ರೆ ಮಾಡಿ ಸ್ಪರ್ಧೆಗೆ ಬೇಕಾದಷ್ಟು ಸಹಿಗಳನ್ನು ಸಂಗ್ರಹಿಸಿರುವುದಾಗಿ ಅಲೆಕ್ಸೀ ನಾವಲ್ನಿ ಹೇಳಿಕೊಂಡಿದ್ದಾರೆ. 
ನಾವಲ್ನೀ ಸ್ಪರ್ಧೆ ಅಸಾಧ್ಯ; ರಷ್ಯಾ ರಾಜಕೀಯ ಪಂಡಿತರ ವಿಶ್ಲೇಷಣೆ
ಇನ್ನು ಪ್ರಸ್ತುತ ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಾಗಿ ಹೇಳಿಕೊಳ್ಳುತ್ತಿರುವ ಪ್ರತಿಪಕ್ಷ ನಾಯಕ ಅಲೆಕ್ಸಿ ನಾವಲ್ನಿ ಸ್ಪರ್ಧೆ ಅಸಾಧ್ಯ ಎಂದು ರಷ್ಯಾ ರಾಜಕೀಯ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಅಲೆಕ್ಸೀ ನಾವಲ್ನೀ ವಿರುದ್ಧ ಹಲವು ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದ್ದು, ಅವುಗಳೆಲ್ಲವೂ ನ್ಯಾಯಾಲದ ವಿಚಾರಣೆ ಹಂತದಲ್ಲಿವೆ. ಹೀಗಾಗಿ ನಾವಲ್ನಿಗೆ ಚುನಾವಣೆ ಸ್ಪರ್ಧಿಸುವ ಅರ್ಹತೆಯೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಏತನ್ಮಧ್ಯೆ ತಮ್ಮ ವಿರುದ್ಧದ ಆರೋಪಗಳಿಗೆ ಉತ್ತರಿಸಿರುವ ನಾವಲ್ನಿ ತಮ್ಮ ವಿರುದ್ಧ ಆರೋಪಗಳೆಲ್ಲವೂ ರಾಜಕೀಯ ಪ್ರೇರಿತ ಮತ್ತು ಷಡ್ಯಂತ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com