ಪಾಕ್ ಸೇನಾ ಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಅವರ ಪತ್ನಿ ಮತ್ತು ತಾಯಿ ಭೇಟಿ ಮಾಡಿದ ಬಳಿಕ ಪಾಕಿಸ್ತಾನ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 'ನಾನು ನನ್ನ ಪತ್ನಿ ಮತ್ತು ತಾಯಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೆ. ಅದರಂತೆ ಇಂದು ಪತ್ನಿ ಹಾಗೂ ತಾಯಿ ಭೇಟಿಗೆ ಅವಕಾಶ ಕಲ್ಪಿಸಿದ ಪಾಕಿಸ್ತಾನಕ್ಕೆ ಧನ್ಯವಾದ' ಎಂದು ಜಾಧವ್ ಹೇಳಿದ್ದಾರೆ.