ಬೀಜಿಂಗ್: ಅಫ್ಘಾನಿಸ್ತಾನ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಚೀನಾ ಡಿ.26 ರಂದು ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಅಧಿಕಾರಿಗಳ ಸಭೆಯನ್ನು ಆಯೋಜಿಸಿದೆ.
ಪಾಕಿಸ್ತಾನ ವಿದೇಶಾಂಗ ಇಲಾಖೆ, ಅಫ್ಘಾನಿಸ್ತಾನ ವಿದೇಶಾಂಗ ಇಲಾಖೆ ಹಾಗೂ ಚೀನಾ ವಿದೇಶಾಂಗ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಮೂರು ರಾಷ್ಟ್ರಗಳ ನಡುವೆ ಆರ್ಥಿಕ ಭದ್ರತಾ ಸಹಕಾರವನ್ನು ಉತ್ತೇಜಿಸುವ ಬಗ್ಗೆ ಮಾತುಕತೆಗಳು ನಡೆದಿವೆ.
ಪಾಕಿಸ್ತಾನದಲ್ಲಿ ಎಕನಾಮಿಕ್ ಕಾರಿಡಾರ್ ಯೋಜನೆಯನ್ನು ಪ್ರಾರಂಭಿಸಿ ಆರ್ಥಿಕ ಹಿತಾಸಕ್ತಿಗಳನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಚೀನಾ ಅಫ್ಘಾನಿಸ್ತಾ-ಪಾಕಿಸ್ತಾನ ಸಂಘರ್ಷಕ್ಕೆ ಮಧ್ಯಸ್ಥಿಕೆ ವಹಿಸಲು ಉತ್ಸುಕವಾಗಿದ್ದು ಉಭಯ ರಾಷ್ಟ್ರಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ.
ಶಾಂತಿ ಪ್ರಕ್ರಿಯೆಯಲ್ಲಿ ಹಾಗೂ ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಿಸುವಂತೆ ಮಾಡುವುದರಲ್ಲಿ ನೆರವು ನೀಡುವುದಾಗಿ ಚೀನಾ ಭರವಸೆ ನೀಡಿದೆ.