ಕೈರೋ: ದಕ್ಷಿಣ ಕೈರೋದ ಚರ್ಚ್ ಒಂದರ ಬಳಿ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ.
ಚರ್ಚ್ ಬಳಿ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಸ್ಥಳದಲ್ಲೇ 9 ಮಂದಿ ಸಾವನ್ನಪ್ಪಿದ್ದು ಹಲವು ಗಾಯಗೊಂಡಿದ್ದಾರೆ. ಇನ್ನು ಬಂಧೂಕುದಾರಿಯನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಆರೋಗ್ಯ ಇಲಾಖೆ ವಕ್ತಾರ ಖಲೀದ್ ಹೇಳಿದ್ದಾರೆ.
ಬಂಧೂಕುದಾರಿ ವ್ಯಕ್ತಿಯೊಬ್ಬ ಚರ್ಚ್ ಒಳಗೆ ನುಗ್ಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಭದ್ರತೆಯಲ್ಲಿ ತೊಡಗಿದ್ದ ಪೊಲೀಸರು ಆತನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಇನ್ನು ಮತೋರ್ವ ಬಂಧೂಕುದಾರಿಯೊರ್ವ ಘಟನಾ ಸ್ಥಳದಿಂದ ಪರಾರಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.