ಪಾಲೆಸ್ತೀನ್ ನ ಪಾಕಿಸ್ತಾನ ರಾಯಭಾರಿ ವಲೀದ್ ಅಬು ಅಲೀ ಅವರು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಜೆಯುಡಿ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯೀದ್ ನೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಬಗೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿತ್ತು. ಇದೀಗ ಈ ವಿಚಾರ ಭಾರತ ಸರ್ಕಾರದ ಗಮನಕ್ಕೂ ಬಂದಿದ್ದು, ಕೇಂದ್ರ ವಿದೇಶಾಂಗ ಇಲಾಖೆ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಈ ಬಗ್ಗೆ ಭಾರತದಲ್ಲಿರುವ ಪಾಲೆಸ್ತೀನ್ ರಾಯಭಾರ ಕಚೇರಿಗೆ ಪತ್ರ ಕೂಡ ಬರೆಯಲಾಗಿದ್ದು, ಪತ್ರದಲ್ಲಿ ಪಾಕಿಸ್ತಾನ ಪಾಲೆಸ್ತೀನ್ ರಾಯಭಾರಿ ಉಗ್ರ ಹಫೀಜ್ ಸಯ್ಯೀದ್ ನೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಲಭ್ಯವಾಗಿವೆ. ಪಾಲೆಸ್ತೀನ್ ಸರ್ಕಾರದಿಂದ ನಾವು ಇದನ್ನು ನಿರೀಕ್ಷಿಸರಲಿಲ್ಲ. ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ವಿವರ ನೀಡುವಂತೆ ವಿದೇಶಾಂಗ ಇಲಾಖೆ ಪತ್ರ ಬರೆದಿದೆ.