ವಿದೇಶ

ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್'ಗೆ ಹೊಸ ವರ್ಷದ ಶುಭಾಶಯ ಕೋರಿದ ರಷ್ಯಾ ಅಧ್ಯಕ್ಷ

ಹೊಸ ವರ್ಷಕ್ಕೆ ಇನ್ನು ಕೇವಲ ಒಂದು ದಿನ ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಭಾಶಯ ಸಂದೇಶವನ್ನು ಕಳುಹಿಸಿದ್ದಾರೆ...

ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್'ಗೆ ಹೊಸ ವರ್ಷದ ಶುಭಾಶಯ ಕೋರಿದ ರಷ್ಯಾ ಅಧ್ಯಕ್ಷ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Published On :
ಮಾಸ್ಕೋ: ಹೊಸ ವರ್ಷಕ್ಕೆ ಇನ್ನು ಕೇವಲ ಒಂದು ದಿನ ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಶುಭಾಶಯ ಸಂದೇಶವನ್ನು ಕಳುಹಿಸಿದ್ದಾರೆ. 
ಕ್ರೆಮ್ಲಿನ್ ನಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಇಂಡೋ-ರಷ್ಯಾ ಸಂಬಂಧಕ್ಕೆ 70 ವರ್ಷ ಪೂರ್ಣಗೊಂಡಿದ್ದು, ಹೊಸ ವರ್ಷ ಉಭಯ ರಾಷ್ಟ್ರಗಳಿಗೆ ಪ್ರಮುಖ ಮೈಲುಗಲ್ಲಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ 2017ನೇ ಸಾಲಿನಲ್ಲಿ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ಉತ್ತಮವಾಗಿ ಸಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಭವಿಷ್ಯದಲ್ಲಿಯೂ ಇಂಡೋ ರಷ್ಯಾ ನಡುವಿನ ರಾಜಕೀಯ, ವ್ಯಾಪಾರ, ಆರ್ಥಿಕತೆ, ವಿಜ್ಞಾನ,ತಂತ್ರಜ್ಞಾನ, ಸಂಸ್ಕೃತಿಯ ಸಂಬಂಧಗಳು ಹೀಗೆಯೇ ಉತ್ತಮವಾಗಿರಲಿದೆ ಎಂದು ವಿಶ್ವಾಸವಿಟ್ಟಿದ್ದೇನೆಂದು ತಿಳಿಸಿದ್ದಾರೆ. 
ವಿಶ್ವಸಂಸ್ಥೆ, ಬ್ರಿಕ್ಸ್, ಶಾಂಘೈ ಸಹಕಾರ ಒಕ್ಕೂಟ ಹಾಗೂ ಇತರೆ ವಿಶ್ವ ಸಮುದಾಯದೊಂದಿಗೆ ಕೈಜೋಡಿಸಿರುವ ಭಾರತ, ಜಾಗತಿಕ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಉತ್ತಮವಾಗಿ ಪಾಲ್ಗೊಳ್ಳುತ್ತಿರುವುದನ್ನು ಇದೇ ವೇಳೆ ಪುಟಿನ್ ಅವರು ಶ್ಲಾಘಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.