ಅಮೆರಿಕಾ ಕಾರ್ಯಾಚರಣೆಗಳಿಗೆ ನೀಡಿದ್ದ ಅನುಮತಿ ಹಿಂಪಡೆದ ಯೆಮೆನ್

ಯೆಮೆನ್ ತನ್ನ ನೆಲದಲ್ಲಿ ಕಾರ್ಯಾಚರಣೆ ನಡೆಸಲು ಅಮೆರಿಕಾಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿದೆ.
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದ ಪ್ರಕಾರ ಯೆಮೆನ್ ನಲ್ಲಿ ಅಮೆರಿಕಾ ಯೋಧರು ನಡೆಸಿದ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ನಾಗರಿಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಯೆಮೆನ್ ತನ್ನ ನೆಲದಲ್ಲಿ ಕಾರ್ಯಾಚರಣೆ ನಡೆಸಲು ಅಮೆರಿಕಾಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿದೆ. 
ಯೆಮೆನ್ ನಲ್ಲಿ ಅಮೆರಿಕ ನಡೆಸಿದ ಕಾರ್ಯಾಚರಣೆಯಲ್ಲಿ ಮಕ್ಕಳು ಸಾವನ್ನಪ್ಪಿರುವ ಫೋಟೋಗಳು ಪ್ರಕಟವಾಗಿದ್ದು, ಯೆಮೆನ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಟಿಸಿದೆ. ಕಾರ್ಯಾಚರಣೆಯಲ್ಲಿ ಸೀಲ್ ಟೀಂ 6 ನ ಸದಸ್ಯ ವಿಲಿಯಮ್ ಓವೆನ್ಸ್ ಸಹ ಮೃತಪಟ್ಟಿದ್ದಾರೆ. 
ಡೊನಾಲ್ಡ್ ಟ್ರಂಪ್ ಆದೇಶದ ಪ್ರಕಾರ ಯೆಮೆನ್ ನಲ್ಲಿ ನಡೆದ ಕಾರ್ಯಾಚರಣೆಯನ್ನು ಶ್ವೇತ ಭವನ ಯಶಸ್ವಿಯಾಗಿದೆ ಎಂದು ಹೇಳುತ್ತಿದೆಯಾದರೂ, ಯೆಮೆನ್ ತನ್ನ ನೆಲದಲ್ಲಿ ಕಾರ್ಯಾಚರಣೆ ನಡೆಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿರುವುದು ಡೊನಾಲ್ಡ್ ಟ್ರಂಪ್ ಗೆ ಉಂಟಾದ ಹಿನ್ನೆಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಯೆಮೆನ್ ನ ಕ್ರಮದ ಬಗ್ಗೆ ಶ್ವೇತ ಭವನ ಈ ವರೆಗೂ ಪ್ರತಿಕ್ರಿಯೆ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com