ಬಾಗ್ದಾದ್'ನಲ್ಲಿ ಕಾರ್ ಬಾಂಬ್ ದಾಳಿ: 55 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಕಾರ್ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 55 ಮಂದಿ ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ...
ಬಾಗ್ದಾದ್'ನಲ್ಲಿ ಕಾರ್ ಬಾಂಬ್ ದಾಳಿ: 55 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಗ್ದಾದ್'ನಲ್ಲಿ ಕಾರ್ ಬಾಂಬ್ ದಾಳಿ: 55 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ
Updated on

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಕಾರ್ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 55 ಮಂದಿ ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಬಾಗ್ದಾದ್'ನ ಶಿಯಾತೆ ಅಲ್-ಬಯಾ ಬಳಿ ಕಾರ್ ಬಾಂಬ್ ಸ್ಫೋಟಿಸಲಾಗಿದ್ದು, ಸ್ಥಳದಲ್ಲಿಯೇ 55 ಮಂದಿ ದುರ್ಮರಣವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ದಾಳಿ ಹೊಣೆಗಾರಿಕೆಯನ್ನು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಇದಲ್ಲದೆ, ಬಾಗ್ದಾದ್ ನ ನಾಲ್ಕು ಪ್ರದೇಶಗಳಲ್ಲೂ ನಿನ್ನೆ ದಾಳಿ ನಡೆಸಲಾಗಿತ್ತು. ವಿವಿಧೆಡೆ ನಡೆಸಲಾಗಿದ್ದ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದರು. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಾರ್ ಬಾಂಬ್ ದಾಳಿಯನ್ನು ಅಮೆರಿಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com