ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 100 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 100 ಕ್ಕೂ ಹೆಚ್ಚುಮಂದಿ ಸಾವನ್ನಪ್ಪಿ 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 100 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 100 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

ಕರಾಚಿ: ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 100 ಕ್ಕೂ ಹೆಚ್ಚುಮಂದಿ ಸಾವನ್ನಪ್ಪಿ 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಸಿಂಧ್ ಪ್ರಾಂತ್ಯದ ಸೆಹ್ವಾನ್ ನಲ್ಲಿರುವ ಲಾಲ್ ಶಹಭಾಝ್ ಖಲಂದರ್ ಹೆಸರಿನ ದರ್ಗಾದಲ್ಲಿ ಪ್ರತಿ ಗುರವಾರ ಜನರ ಸಂಖ್ಯೆ ಹೆಚ್ಚಾಗಿರುತ್ತದೆ. ಅಲ್ಲದೆ, ಧಮಲ್ ಎಂಬ ಸಾಂಪ್ರದಾಯಿಕ ನೃತ್ಯ ಕಾರ್ಯಕ್ರಮದ ಭಾಗವಾಗಿ ಅತೀ ಹೆಚ್ಚು ಸಂಖೆಯಲ್ಲಿ ಜನರು ಸೇರಿರುತ್ತಾರೆ. ಈ ವೇಳೆಯಲ್ಲಿ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೊದಲಿಗೆ ಗ್ರೆನೇಡ್ ದಾಳಿ ನಡೆಸಿರುವ ಉಗ್ರರು ಬಳಿ ತಮ್ಮನ್ನು ಸ್ಫೋಟಿಸಿಕೊಂಡಿದ್ದಾರೆ. ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಉಗ್ರರ ದಾಳಿ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಪಾಕಿಸ್ತಾನ-ಆಫ್ಘಾನಿಸ್ತಾನ ಗಡಿಯನ್ನು ಬಂದ್ ಮಾಡಲಾಗಿದೆ. ಮುಂದಿನ ಕ್ರಮಗಳ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪಾಕಿಸ್ತಾನ ಸೇನಾ ಪಡೆ ಹೇಳಿಕೊಂಡಿದೆ.

ಆತ್ಮಾಹುತಿ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿದ್ದು, ಸಾವನ್ನಪ್ಪಿದ ಕುಟುಂಬಸ್ಥರ ಕುರಿತಂತೆ ಸಂತಾಪವನ್ನು ಸೂಚಿಸುತ್ತಿದ್ದೇವೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ. ಭಯೋತ್ಪಾದನೆ ವಿರುದ್ಧದ ಪಾಕಿಸ್ತಾನದ ಹೋರಾಟಕ್ಕೆ ನಾವು ಎಂದಿಗೂ ಜೊತೆಯಲ್ಲಿರುತ್ತೇವೆ. ಭಯೋತ್ಪಾದನಾ ವಿಚಾರದಲ್ಲಿ ಪಾಕಿಸ್ತಾನ ಜೊತೆಗಿನ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com