ಅತ್ಮಾಹುತಿ ದಾಳಿ ಬಳಿಕ ಕ್ಷಿಪ್ರ ಕಾರ್ಯಾಚರಣೆ: 39 ಶಂಕಿತ ಉಗ್ರರನ್ನು ಹತ್ಯೆಗೈದ ಪಾಕ್ ಸೇನೆ

ಸೂಫಿ ದರ್ಗಾದ ಮೇಲೆ ಇಸಿಸ್ ಉಗ್ರರು ಆತ್ಮಾಹುತಿ ದಾಳಿ ನಡೆಸಿದ ಬೆನ್ನಲ್ಲೇ ಉಗ್ರರ ವಿರುದ್ಧ ಪಾಕಿಸ್ತಾನ ಸೇನಾಪಡೆ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿದ್ದು, ಈವರೆಗೂ 39 ಶಂಕಿತ ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು...
ಆತ್ಮಾಹುತಿ ದಾಳಿ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಪಾಕಿಸ್ತಾನ ಸೇನೆ
ಆತ್ಮಾಹುತಿ ದಾಳಿ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಪಾಕಿಸ್ತಾನ ಸೇನೆ

ಇಸ್ಲಾಮಾಬಾದ್: ಸೂಫಿ ದರ್ಗಾದ ಮೇಲೆ ಇಸಿಸ್ ಉಗ್ರರು ಆತ್ಮಾಹುತಿ ದಾಳಿ ನಡೆಸಿದ ಬೆನ್ನಲ್ಲೇ ಉಗ್ರರ ವಿರುದ್ಧ ಪಾಕಿಸ್ತಾನ ಸೇನಾಪಡೆ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿದ್ದು, ಈವರೆಗೂ 39 ಶಂಕಿತ ಉಗ್ರರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸಿಂಧ್ ಪ್ರಾಂತ್ಯದ ಸೆಹ್ವಾನ್ ನಲ್ಲಿರುವ ಲಾಲ್ ಶಹಭಾಝ್ ಖಲಂದರ್ ಹೆಸರಿನ ದರ್ಗಾದಲ್ಲಿ ನಿನ್ನೆ ಸಂಜೆ ಉಗ್ರರು ಅಟ್ಟಹಾಸ ಮೆರೆದಿದ್ದರು, ದರ್ಗಾದಲ್ಲಿ ಮೊದಲಿಗೆ ಗ್ರೆನೇಡ್ ದಾಳಿ ನಡೆಸಿದ್ದ ಉಗ್ರರು ನಂತರ ಅತ್ಮಾಹುತಿ ದಾಳಿ ನಡೆಸಿದರು. ಘಟನೆಯಲ್ಲಿ 100 ಜನರು ಸಾವನ್ನಪ್ಪಿ, 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.

ಅತ್ಮಾಹುತಿ ದಾಳಿ ನಡೆಸುಯುತ್ತಿದ್ದಂತೆಯೇ ಉಗ್ರರ ದಮನಕ್ಕೆ ಪಾಕಿಸ್ತಾನ ಸೇನಾ ಪಡೆ ಮುಂದಾಗಿತ್ತು. ಉಗ್ರರ ವಿರುದ್ದ ರಾತ್ರಿಯಿಡೀ ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ವರೆಗೂ 39 ಶಂಕಿತ ಉಗ್ರರನ್ನು ಹತ್ಯೆ ಮಾಡಲಾಗಿದ್ದು 47 ಶಂಕಿತರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಲ್ಲಿನ ಭದ್ರತಾಧಿಕಾರಿಗಳು ಹೇಳಿಕೊಂಡಿದ್ದಾರೆ.

ಉಗ್ರರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಶೂಟೌಟ್ ನಡೆಸಲಾಗಿತ್ತು. ಈ ವೇಳೆ 39 ಮಂದಿಯನ್ನು ಹತ್ಯೆ ಮಾಡಲಾಗಿದೆ. ಪ್ರಸ್ತುತ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರೆದಿದ್ದು, ಕಾರ್ಯಾಚರಣೆ ಕುರಿತಂತೆ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com