ಸೊಮಾಲಿಯಾ ಮಾರುಕಟ್ಟೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 39 ಸಾವು, 47 ಜನರಿಗೆ ಗಾಯ

ಸೊಮಾಲಿಯಾ ರಾಜಧಾನಿ ಮೊಗಾದಿಶು ನಗರದ ಜನನಿಬಿಡ ಪ್ರದೇಶ ಮಾರುಕಟ್ಟೆಯಲ್ಲಿ ಅತ್ಮಾಹುತಿ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿ 47 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ...
ಸೊಮಾಲಿಯಾ ಮಾರುಕಟ್ಟೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 39 ಸಾವು, 47 ಜನರಿಗೆ ಗಾಯ
ಸೊಮಾಲಿಯಾ ಮಾರುಕಟ್ಟೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 39 ಸಾವು, 47 ಜನರಿಗೆ ಗಾಯ
Updated on

ಮೊಗಾದಿಶು: ಸೊಮಾಲಿಯಾ ರಾಜಧಾನಿ ಮೊಗಾದಿಶು ನಗರದ ಜನನಿಬಿಡ ಪ್ರದೇಶ ಮಾರುಕಟ್ಟೆಯಲ್ಲಿ ಅತ್ಮಾಹುತಿ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿ 47 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮಾರುಕಟ್ಟೆ ಪ್ರದೇಶದ ಬಳಿ ಕಾರೊಂದರಲ್ಲಿ ಬಂದಿರುವ ದಾಳಿಕೋರ ಇದ್ದಕ್ಕಿದ್ದಂತೆ ತೊಟ್ಟಿದ್ದ ಆತ್ಮಾಹುತಿ ಬಾಂಬ್ ನ್ನು ಸ್ಫೋಟಿಸಿದ್ದಾನೆ. ಪರಿಣಾಮ ಸ್ಥಳದಲ್ಲಿದ್ದ 39ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ನಾನು ಅಂಗಡಿಯೊಳಗಿದ್ದೆ. ಕಾರಿನಲ್ಲಿ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟಿಸಿದ. 20 ಕ್ಕೂ ಹೆಚ್ಚು ಮಂದಿ ರಕ್ತಸಿಕ್ತವಾಗಿ ಕೆಳಗೆ ಬಿದ್ದಿರುವುದನ್ನು ನಾನು ನೋಡಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬ ಹೇಳಿದ್ದಾನೆ. ದಾಳಿಯ ಹೊಣೆಯನ್ನು ಈವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತಿಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com