ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ಅಮೆರಿಕನ್ ಡಾ. ರಾಜೀವ್ ಜೆ.ಶಾ ಅವರಿಗೆ ಶ್ವೇತ ಭವನದಲ್ಲಿ ಪ್ರಮುಖ ಹುದ್ದೆ ನೀಡಿದ್ದಾರೆ.
ಶಾ ಅವರ ಪೋಷಕರು ಗುಜರಾತ್ ನಿಂದ ಅಮೆರಿಕಕ್ಕೆ ವಲಸೆ ಹೋಗಿದ್ದರು. ಇದೀಗ ಶಾ ಅಧ್ಯಕ್ಷರ ಉಪ ಸಹಾಯಕರಾಗಿ ಮತ್ತು ಉಪ ಸಂವಹನ ನಿರ್ದೇಶಕ ಮತ್ತು ಸಂಶೋಧನಾ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ ಎಂದು ಅಧ್ಯಕ್ಷೀಯ ಪರಿವರ್ತನಾ ತಂಡ ಘೋಷಿಸಿದೆ.
ಪ್ರಸ್ತುತ ರಾಜ್ ಶಾ ರಿಪಬ್ಲಿಕನ್ ರಾಷ್ಟ್ರೀಯ ಸಮಿತಿಯ ವಿರೋಧ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇದರಲ್ಲಿ ಅವರು ಮೊನ್ನೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ವಿರುದ್ಧ ಪ್ರಚಾರದ ನೇತೃತ್ವವನ್ನು ವಹಿಸಿದ್ದರು.